HomeBengaluru Newsಸೈಬರ್ ಖದೀಮರ ಜಾಲಕ್ಕೆ ಬಿದ್ದ ವೃದ್ಧೆ: ಡಿಜಿಟಲ್ ಬಂಧನ ಹೆಸರಿನಲ್ಲಿ 24 ಕೋಟಿ ವಂಚನೆ!

ಸೈಬರ್ ಖದೀಮರ ಜಾಲಕ್ಕೆ ಬಿದ್ದ ವೃದ್ಧೆ: ಡಿಜಿಟಲ್ ಬಂಧನ ಹೆಸರಿನಲ್ಲಿ 24 ಕೋಟಿ ವಂಚನೆ!

For Dai;y Updates Join Our whatsapp Group

Spread the love

ಬೆಂಗಳೂರು:  ನಗರದಲ್ಲಿ ಡಿಜಿಟಲ್ ಬಂಧನ ಹೆಸರಿನಲ್ಲಿ ಸೈಬರ್ ವಂಚಕರು ವೃದ್ಧೆಯೊಬ್ಬರನ್ನು ಬೆದರಿಸಿ 24 ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಶಿವಾಜಿನಗರ ನಿವಾಸಿ ಲಕ್ಷ್ಮೀ ರಾಮಮೂರ್ತಿ ಎಂಬ ವೃದ್ಧೆಯನ್ನು ಗುರಿಯಾಗಿಸಿಕೊಂಡ ಸೈಬರ್ ವಂಚಕರು, “ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಿಮ್ಮ ಹೆಸರು ಇದೆ” ಎಂದು ಬೆದರಿಕೆ ಹಾಕಿ ಹಲವು ತಿಂಗಳುಗಳ ಕಾಲ ಡಿಜಿಟಲ್ ಬಂಧನದಲ್ಲಿರುವಂತೆ ನಂಬಿಸಿದ್ದಾರೆ.

ಆಸ್ತಿ ಮಾರಾಟದಿಂದ ಲಕ್ಷ್ಮೀ ರಾಮಮೂರ್ತಿಗೆ ಕೋಟ್ಯಂತರ ರೂಪಾಯಿ ಬಂದಿದ್ದ ಮಾಹಿತಿ ತಿಳಿದ ವಂಚಕರು, ಕಳೆದ ಜನವರಿಯಿಂದ ಮೇ ತಿಂಗಳವರೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಈ ಅವಧಿಯಲ್ಲಿ ಬರೋಬ್ಬರಿ 24 ಕೋಟಿ ರೂಪಾಯಿ ವಂಚಕರ ಪಾಲಾಗಿದೆ ಎನ್ನಲಾಗಿದೆ.

ಇಷ್ಟೊಂದು ಹಣ ನೀಡಿದ ಬಳಿಕವೂ ಇನ್ನಷ್ಟು ಹಣ ಕೊಡಬೇಕು ಎಂದು ವಂಚಕರು ಒತ್ತಾಯ ಮಾಡುತ್ತಿದ್ದರು. ಇದರಿಂದ ಆತಂಕಗೊಂಡ ವೃದ್ಧೆ ಮನೆಯಲ್ಲಿದ್ದ ಸುಮಾರು 1.30 ಕಿಲೋ ಚಿನ್ನಾಭರಣವನ್ನು ಅಡ ಇಟ್ಟು ಹಣ ಪಡೆಯಲು ಬ್ಯಾಂಕ್‌ಗೆ ತೆರಳಿದ್ದರು.

ಈ ವೇಳೆ ವೃದ್ಧೆಯ ವರ್ತನೆ ಅನುಮಾನಾಸ್ಪದವಾಗಿ ಕಂಡ ಹಿನ್ನೆಲೆ ಕಂಟೋನ್ಮೆಂಟ್ ಶಾಖೆಯ ಐಸಿಐಸಿಐ ಬ್ಯಾಂಕ್ ವ್ಯವಸ್ಥಾಪಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಿಸಿಬಿ ಸೈಬರ್ ಅಪರಾಧ ವಿಭಾಗದ ಪೊಲೀಸರು ವೃದ್ಧೆಯನ್ನು ವಿಚಾರಣೆ ನಡೆಸಿದ್ದಾರೆ.

ಆರಂಭದಲ್ಲಿ ವೃದ್ಧೆ ಯಾವುದೇ ಮಾಹಿತಿ ನೀಡಲು ಹಿಂದೇಟು ಹಾಕಿದರೂ, ಬಳಿಕ ಸೈಬರ್ ವಂಚಕರು ಡಿಜಿಟಲ್ ಬಂಧನ ಮಾಡಿ ಹಣ ವಸೂಲಿ ಮಾಡಿರುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿದೇಶದಲ್ಲಿರುವ ವೃದ್ಧೆಯ ಮಕ್ಕಳಿಗೂ ಮಾಹಿತಿ ನೀಡಲಾಗಿದೆ.

ಪ್ರಕರಣ ಸಂಬಂಧ ಮುಂಬೈ, ಅಲಹಾಬಾದ್ ಹಾಗೂ ದೆಹಲಿ ಮೂಲದ ಆರೋಪಿಗಳನ್ನು ಬಂಧಿಸಲಾಗಿದ್ದು, ಗೌರವ್ ಕುಮಾರ್, ಓಂ ಪ್ರಕಾಶ್ ರಾಜಪೂತ್ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಸೈಬರ್ ವಂಚಕರು 22 ಬ್ಯಾಂಕ್ ಖಾತೆಗಳ ಮೂಲಕ ಹಣ ವರ್ಗಾವಣೆ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದುವರೆಗೆ 60 ಲಕ್ಷ ರೂಪಾಯಿ ಇರುವ ಬ್ಯಾಂಕ್ ಖಾತೆಗಳನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!