HomePolitics Newsಚುನಾವಣಾ ಜಾಗೃತಿ ಜಾಥಾ ಕಾರ್ಯಕ್ರಮ

ಚುನಾವಣಾ ಜಾಗೃತಿ ಜಾಥಾ ಕಾರ್ಯಕ್ರಮ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ನರಗುಂದ : ಲೋಕಸಭಾ ಚುನಾವಣೆ-2024ರ ಅಂಗವಾಗಿ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ತಾ.ಪಂ ನರಗುಂದ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನರಗುಂದ ಹಾಗೂ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ತಾಲೂಕಿನ ಶಿರೋಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುನಾವಣಾ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು.

ನರಗುಂದ-68 ಸಹಾಯಕ ಚುನಾವಣಾಧಿಕಾರಿಗಳಾದ ಡಾ. ಹಂಪಣ್ಣ ಸಜ್ಜನ್ ಮಾತನಾಡಿ, ಮತದಾನ ಎಂಬುದು ಪ್ರತಿ ಭಾರತೀಯನ ಹಕ್ಕು. ಅದನ್ನು ಸ್ವಯಂ ಪ್ರೇರಿತವಾಗಿ ಚಲಾವಣೆ ಮಾಡುವಂತಾಗಬೇಕು.

ಅಲ್ಲದೇ ಮೇ-7ರಂದು ಕಡ್ಡಾಯ ಮತ ಚಲಾವಣೆಯಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚುನಾವಣಾ ಜಾಗೃತಿ ಕುರಿತು ಚುನಾವಣಾ ಆಯೋಗದಿಂದ 2 ನಿಮಿಷಗಳ ವಿಡಿಯೋ ಚಿತ್ರಣವನ್ನು ಪ್ರಚುರಪಡಿಸಲಾಯಿತು.

ಸಭೆಯಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರದೀಪ ನಾಡಗೇರ, ವೈದ್ಯಾಧಿಕಾರಿ ಡಾ. ಪಂಕಜಾ ಮೈತ್ರಿ, ಪಿಡಿಓ ವಾಯ್.ಬಿ. ಸಂಕನಗೌಡ್ರ, ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img