ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

0
Spread the love

ನವದೆಹಲಿ: ಭಾರತ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ. ಹಾಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಸ್ಥಾನ ತೆರವಾಗಿದ್ದು, ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ.

Advertisement

ಚುನಾವಣೆ ಸಂಬಂಧ ಅಧಿಕೃತ ಅಧಿಸೂಚನೆ ಆಗಸ್ಟ್ 7 ರಂದು ಹೊರಡುವ ಸಾಧ್ಯತೆ ಇದೆ. ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನವಾಗಿದ್ದು, ಪರಿಶೀಲನೆ ಆಗಸ್ಟ್ 22 ರಂದು ನಡೆಯಲಿದೆ. ನಾಮಪತ್ರ ಹಿಂಪಡೆಯಲು ಆಗಸ್ಟ್ 25ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಚುನಾವಣೆಯಲ್ಲಿ ರಾಜ್ಯಸಭೆಯ 233 ಚುನಾಯಿತ ಸದಸ್ಯರು, 12 ನಾಮನಿರ್ದೇಶಿತ ಸದಸ್ಯರು ಮತ್ತು ಲೋಕಸಭೆಯ 543 ಸದಸ್ಯರು ಸೇರಿ ಒಟ್ಟು 788 ಸಂಸದರು ಮತ ಚಲಾಯಿಸಲಿದ್ದಾರೆ. ಮತದಾನ ಪ್ರಕ್ರಿಯೆ ಸೆಪ್ಟೆಂಬರ್ 9ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ಅಂದೇ ಫಲಿತಾಂಶ ಘೋಷಣೆಯು ಸಂಭವಿಸಲಿದೆ ಎಂದು ಆಯೋಗ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here