ಬೆಂಗಳೂರು: ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. 2023ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಆಳಂದ ಕ್ಷೇತ್ರದಲ್ಲಿ ಅಕ್ರಮ ಆಗಿದೆ ಎಂದು ಆರೋಪಿಸಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಇನ್ನೂ ವಿಚಾರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ.
Advertisement
ಅಳಂತದಲ್ಲಿ ಮತದಾರ ಪಟ್ಟಿಯಿಂದ ಕೈ ಬಿಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ಅವರು ಖಚಿತ ಪಡಿಸಿಕೊಂಡು ಈ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.
ರಾಹುಲ್ ಗಾಂಧಿಯವರ ಜೊತೆ ಇಡೀ ದೇಶ ಇದೆ. ನಮ್ಮ ಮತ ನಮ್ಮ ಹಕ್ಕು ಹೋರಾಟ ಮಾಡ್ತೀವಿ. ಹಿಂಬಾಗಿಲಿನಿಂದ ಬಂದಿರೋ ಈ ಸರ್ಕಾರವನ್ನು ಕಿತ್ತು ಹಾಕುವವರೆಗೂ ನಾವು ಹೋರಾಟ ಮಾಡಬೇಕು ಎಂದು ಕರೆ ನೀಡಿದ್ದಾರೆ.