ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಕಳ್ಳತನದ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಆರೋಪಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಆಯೋಗ ಸೂಚಿಸಿದೆ.
ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದಾಖಲಾತಿ ಕೊಡಿ ಅಂತ ನೋಟೀಸ್ ಕೊಟ್ಟಿದ್ದಾರೆ. ನೀವೇನು ನೋಟೀಸ್ ಕೊಟ್ಟಿದೆ ಅಂತ ಹೇಳ್ತೀರಾ? ದಾಖಲಾತಿಗಳನ್ನ ಕೊಡಿ ಅಂತ ಕೇಳಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ನಕಲಿ ಮತ ಚಲಾವಣೆಯಾಗಿದೆ ಎಂದು ನೀವು ಮಾಡಿರುವ ಆರೋಪಗಳಿಗೆ ದಾಖಲೆಗಳನ್ನು ನೀಡಿ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಮತಗಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಆಗಸ್ಟ್ 7ರಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಹೀಗಾಗಿ, ರಾಜ್ಯ ಚುನಾವಣಾ ಆಯೋಗ ಈ ದಾಖಲೆಗಳನ್ನು ನೀಡುವಂತೆ ಸೂಚನೆ ನೀಡಿದೆ.