ಬೆಂಗಳೂರು: ಚುನಾವಣಾ ಆಯೋಗ ರಾಜಕೀಯ ಪಕ್ಷದ ಭಾಗವಾಗುವುದನ್ನು ತಪ್ಪಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆಗಸ್ಟ್ 5ರಂದು ರಾಹುಲ್ ಗಾಂಧಿ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ವಿಧಾನಸಭಾ ಚುನಾವಣೆ ವೇಳೆ ಚಿಲುಮೆ ಸಂಸ್ಥೆ ಬಳಸಿಕೊಂಡು ಅಕ್ರಮ ಎಸಗಿದರು.
ನಮ್ಮ ನಾಯಕರು ಇದರ ಬಗ್ಗೆ ಮಾತನಾಡುತ್ತಾರೆ. ಈ ವಿಚಾರದಲ್ಲಿ ತನಿಖೆ ನಡೆಸಿಯೇ ನಮ್ಮ ನಾಯಕರು ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು ರಾಜಕೀಯ ಉದ್ದೇಶಕ್ಕೆ ರಾಜ್ಯಕ್ಕೆ ಬರುತ್ತಿಲ್ಲ. ಬದಲಾಗಿ ಜನರನ್ನು ಎಚ್ಚರಗೊಳಿಸಲು ಬರುತ್ತಿದ್ದಾರೆ. ನಮಗೆ ಪ್ರಜಾಪ್ರಭುತ್ವ ಉಳಿಯಬೇಕು. ಚುನಾವಣಾ ಆಯೋಗ ರಾಜಕೀಯ ಪಕ್ಷದ ಭಾಗವಾಗುವುದನ್ನು ತಪ್ಪಿಸಬೇಕು ಎಂದರು.
ಇನ್ನೂ ಬಿಜೆಪಿ ಮತಗಳ್ಳತನ ನಡೆಸಿದೆ ಎಂಬುದನ್ನು ಜನರ ಗಮನಕ್ಕೆ ತರಬೇಕು ಎಂಬುದು ನಮ್ಮ ಉದ್ದೇಶ. ಬಿಜೆಪಿ ಮತಗಳ್ಳತನದ ಬಗ್ಗೆ ಪ್ರತಿಭಟನಾ ಸಭೆ ಅಥವಾ ರ್ಯಾಲಿ ಮಾಡಬೇಕೆ ಎನ್ನುವುದನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ತೀರ್ಮಾನಿಸಲಾಗುವುದು” ಎಂದು ಹೇಳಿದರು.