ಗ್ರಾ.ಪಂ ನೂತನ ಸದಸ್ಯರ ಆಯ್ಕೆ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಶಿಗ್ಲಿ ಗ್ರಾಮ ಪಂಚಾಯಿತಿಯ ವಾರ್ಡ್ ನಂ-1ಕ್ಕೆ ಅಖಂಡಪ್ಪ ಬಸವಂತಪ್ಪ ಕರ್ಜೆಕಣ್ಣವರ ನೂತನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Advertisement

ಈ ವಾರ್ಡಿನ ಸದಸ್ಯರು ನಿಧನರಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಮೇ.25ರಂದು ಚುನಾವಣೆ ಜರುಗಿತ್ತು. ಬುಧವಾರ ಲಕ್ಷ್ಮೇಶ್ವರ ತಹಸೀಲ್ದಾರ ಕಚೇರಿಯಲ್ಲಿ ಮತದಾನ ಪ್ರಕ್ರಿಯೆ ನಡೆದು, ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಶಾಂತವ್ವ ತಿಪ್ಪಣ್ಣ ಸ್ವಾದಿ ಅವರಿಗಿಂತ 209 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗೋಪಾಲ ನಾಯಕ ಕಾರ್ಯನಿರ್ವಹಿಸಿದರು. ತಹಸೀಲ್ದಾರ ವಾಸುದೇವ ಸ್ವಾಮಿ ಗೆಲುವು ಸಾಧಿಸಿದ ಅಭ್ಯರ್ಥಿಗೆ ಆಯ್ಕೆ ಪ್ರಮಾಣಪತ್ರ ನೀಡಿದರು.


Spread the love

LEAVE A REPLY

Please enter your comment!
Please enter your name here