ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಗಜೇಂದ್ರಗಡ ತಾಲೂಕಾ ಸಂಘದ ಅಧ್ಯಕ್ಷರಾಗಿ ಗೋಗೇರಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕಿ ರೇಣುಕಾ ಎಸ್.ಇಟಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
Advertisement
ಪ್ರಧಾನ ಕಾರ್ಯದರ್ಶಿಯಾಗಿ ಭಾರತಿ ಟಿ.ಹೊಸಮನಿ, ಖಜಾಂಚಿಯಾಗಿ ಬಸವರಾಜ ಹೊಸಗೌಡ್ರ, ಜಿಲ್ಲಾ ಪರಿಷತ್ ಸದಸ್ಯರಾಗಿ ವಸಂತ ಗಾರಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಡಾ. ಎಮ್.ಎಸ್. ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.