ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಇಲ್ಲಿನ ಕುಕನೂರಿನ ಕನ್ನಡ ಸಾಹಿತ್ಯ ಸಂಸ್ಕೃತಿ ಅಭಿವೃದ್ಧಿ ಟ್ರಸ್ಟ್ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಜನವರಿ 4ರಂದು ಮೈಸೂರಿನ ವಿಜಯನಗರ ಮೊದಲ ಹಂತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ 13ನೇ ಕನ್ನಡ ನುಡಿಸಿರಿ ಸಮ್ಮೇಳನಾಧ್ಯಕ್ಷರನ್ನಾಗಿ ಚುಟುಕು ಸಿರಿ ರತ್ನ ಹಾಲಪ್ಪ ಗೌಡರನ್ನು ಆಯ್ಕೆ ಮಾಡಲಾಗಿದೆ ಎಂದು ಸಮ್ಮೇಳನದ ಸಂಚಾಲಕ ರುದ್ರಪ್ಪ ಭಂಡಾರಿ ತಿಳಿಸಿದ್ದಾರೆ.
ಮೂಲತಃ ಮೈಸೂರಿನವರಾದ ಇವರು ಅನಿವಾಸಿ ಭಾರತೀಯರಾಗಿ ಕಳೆದ 25 ವರ್ಷಗಳಿಂದ ಕೆನಡಾ ದೇಶದಲ್ಲಿ ವಾಸವಾಗಿದ್ದಾರೆ. ಇವರ ಸರ್ವಾಧ್ಯಕ್ಷತೆಯಲ್ಲಿ ನಾಡಿನ ಸಂಸ್ಕೃತಿ ಪರಂಪರೆ, ನೆಲ, ಜಲ, ಶಿಕ್ಷಣ ಕುರಿತಾಗಿ ವಿಚಾರ ಗೋಷ್ಠಿ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಜರುಗಲಿದೆ ಎಂದು ಟ್ರಸ್ಟ್ ಅಧ್ಯಕ್ಷ ರುದ್ರಪ್ಪ ಭಂಡಾರಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಪಾಧ್ಯಕ್ಷ ಡಾ. ತ್ಯಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



