ಬೆಂಗಳೂರು: ಖಾಸಗಿ ಹೋಟೆಲ್ನ ಸ್ವಿಮ್ಮಿಂಗ್ ಪೂಲ್ನಲ್ಲಿ ಸಂಭವಿಸಿದ ಅವಘಡದಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಮೃತಪಟ್ಟಿದ್ದಾರೆ.
ವಿದ್ಯುತ್ ಶಾಕ್ನಿಂದ ಇಬ್ಬರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹೋಟೆಲ್ನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಮೃತರನ್ನು ಸ್ಲೊವೇನಿಯಾ ಮೂಲದ ಓರಿಯಾಟ್ (45) ಹಾಗೂ ನೆದರ್ಲ್ಯಾಂಡ್ಸ್ ಮೂಲದ ಅಲೆಕ್ಸಾಂಡರ್ ಮ್ಯಾಕ್ಸಿಲನ್ (59) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಹಲಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲೆಕ್ಸಾಂಡರ್ ಅವರ ಪತ್ನಿ ಹೋಟೆಲ್ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇನ್ನು ಇಬ್ಬರ ಮೃತದೇಹಗಳನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ವಿಮ್ಮಿಂಗ್ ಪೂಲ್ನಲ್ಲಿ ವಿದ್ಯುತ್ ಶಾಕ್ ಉಂಟಾಗಲು ಕಾರಣವೇನು? ಹೋಟೆಲ್ ನಿರ್ವಹಣೆಯಲ್ಲಿ ಲೋಪವಾಗಿದೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.










