ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡದಲ್ಲಿರುವ ಎಲೆಕ್ಟ್ರಾನಿಕ್ ಮಾಧ್ಯಮದ ಸಹೋದ್ಯೋಗಿಗಳನ್ನು ಸಂಘಟಿಸುವ ದೃಷ್ಟಿಯಿಂದ ಧಾರವಾಡ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಎಂಬ ಸಂಘವನ್ನು ರಚಿಸಲಾಗಿದ್ದು, ಸಂಘದ ಮೊದಲನೇ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಇದು ಧಾರವಾಡದ ಟಿವಿ ಮಾಧ್ಯಮಗಳಿಗೆ ಸೇರಿದ ಅಧಿಕೃತ ಸಂಘವಾಗಿದೆ.
Advertisement
ಸಂಘದ ಅಧ್ಯಕ್ಷರಾಗಿ ನರಸಿಂಹಮೂರ್ತಿ ಪ್ಯಾಟಿ, ಉಪಾಧ್ಯಕ್ಷರಾಗಿ ಜಾವಿದ್ ಅಧೋನಿ, ಪ್ರಧಾನ ಕಾರ್ಯದರ್ಶಿಯಾಗಿ ಡಿ.ವಿ. ಕಮ್ಮಾರ್, ಕಾರ್ಯದರ್ಶಿಯಾಗಿ ಪ್ರಶಾಂತ ದಿನ್ನಿ ಹಾಗೂ ಖಜಾಂಚಿಯಾಗಿ ಗುರುನಾಥ ಕಟ್ಟಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.