ಅರ್ಹ ಫಲಾನುಭವಿಗಳು ಪರಿಹಾರ ಕಂಡುಕೊಳ್ಳಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಅರ್ಜಿ ಸಲ್ಲಿಸಿ, ಜಿಎಸ್‌ಟಿ ಸಮಸ್ಯೆಯಿಂದ ವಂಚಿತರಾದ ಅರ್ಹ ಫಲಾನುಭವಿಗಳು ಪರಿಹಾರ ಕಂಡುಕೊಳ್ಳಲು ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಚೇರಿಗೆ ಭೇಟಿ ನೀಡುವಂತೆ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಲ್ಪಟ್ಟ ತಾಲೂಕಿನ ಕೆಲವು ಫಲಾನುಭವಿಗಳು ಜಿಎಸ್‌ಟಿ ತಾಂತ್ರಿಕ ಕಾರಣದಿಂದ ಯೋಜನೆಯಿಂದ ವಂಚಿತರಾಗಿದ್ದಾರೆ. ಪತಿ ಮತ್ತು ಮಕ್ಕಳ ಕಾರಣದಿಂದ ಯಜಮಾನಿ ಫಲಾನುಭವಿ ಪಟ್ಟಿಯಿಂದ ಹೊರಗುಳಿಯುವಂತಾಗಿದೆ.

ಆದ್ದರಿಂದ ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾದ ಅರ್ಹರು ತಮ್ಮ ರೇಶನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಝರಾಕ್ಸ್ ಪ್ರತಿಯೊಂದಿಗೆ ಮುಳಗುಂದ ನಾಕಾ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಎದುರಿನ ಉಪವಿಭಾಗಾಧಿಕಾರಿ (ಎಸಿ)ಕಚೇರಿ ಆವರಣದಲ್ಲಿನ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಚೇರಿಗೆ ಭೇಟಿ ನೀಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಅಶೋಕ ಮಂದಾಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here