ವಿಜಯಸಾಕ್ಷಿ ಸುದ್ದಿ, ಗದಗ: ಸಂವಿಧಾನದ ಆಶಯಗಳನ್ನು ಹತ್ತಿಕ್ಕಿ ಪ್ರಜಾಪ್ರಭುತ್ವದ ಕಗ್ಗೊಲೆಗೆ ಕಾರಣವಾದ ತುರ್ತು ಪರಿಸ್ಥಿತಿ ಕರಾಳತೆ ಅನಾವರಣ ಕಾರ್ಯಕ್ರಮವು `ಸಾಮಾಜಿಕ ನ್ಯಾಯಕ್ಕಾಗಿ ನಾಗರಿಕರು’ ವೇದಿಕೆ ವತಿಯಿಂದ ಜುಲೈ 11ರಂದು ಸಂಜೆ 4 ಗಂಟೆಗೆ ಗದಗ ನಗರದ ಮುಳಗುಂದ ನಾಕಾ ಹತ್ತಿರದ ವಿಠಲಾರೂಢ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ವಕ್ತಾರರಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗಮಿಸಲಿದ್ದು, ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ, ನರಗುಂದ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ, ಮಾಜಿ ಸಚಿವ ಕಳಕಪ್ಪ ಬಂಡಿ, ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಉಪಸ್ಥಿತರಿರುವರು.
ಬಿಜೆಪಿ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಂಚಾಲಕರಾದ ಲಿಂಗರಾಜ ಪಾಟೀಲ ಮಲ್ಲಾಪೂರ, ಬಿಜೆಪಿ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಕೆ. ಚವ್ಹಾಣ, ಪಕ್ಕಿರೇಶ ರಟ್ಟಿಹಳ್ಳಿ, ಸಹ-ಸಂಚಾಲಕ ರಮೇಶ ಸಜ್ಜಗಾರ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.