ವಿಜಯಸಾಕ್ಷಿ ಸುದ್ದಿ, ಗದಗ: ಪ್ರವಾಸೋದ್ಯಮ ಇಲಾಖೆಯಿಂದ ಗದಗ ಜಿಲ್ಲೆಗೆ ಒಂದು ವರ್ಷದಲ್ಲಿ 200 ಟ್ಯಾಕ್ಸಿ ವಾಹನಗಳನ್ನು ಸಚಿವ ಎಚ್.ಕೆ. ಪಾಟೀಲರು ನೀಡಿ ಜಿಲ್ಲೆಯ ಹಲವಾರು ನಿರುದ್ಯೋಗ ಯುವಕರಿಗೆ ಉದ್ಯೋಗವನ್ನು ನೀಡಿ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಸರ್ಕಾರ ಜನರಿಗೆ ಸುಳ್ಳು ಉದ್ಯೋಗ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಯುವಕರಿಗೆ ಮೋಸ ಮಾಡಿದೆ. ಆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಬಡವರಿಗೆ, ನಿರುದ್ಯೋಗಿಗಳಿಗೆ ಹಲವಾರು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಸಚಿವರಾದ ಎಚ್.ಕೆ. ಪಾಟೀಲರು ಜಿಲ್ಲೆಯಲ್ಲಿ ಹಲವಾರು ಯುವಕರಿಗೆ ಉದ್ಯೋಗ ನೀಡಲು ಉದ್ಯೋಗ ಮೇಳ ಹಾಗೂ ನಿರುದ್ಯೋಗಿ ಯುವಕರಿಗೆ ಟ್ಯಾಕ್ಸಿ ವಿತರಣೆ ಸೇರಿದಂತೆ ಹಲವಾರು ಯೋಜನೆಗಳನ್ನು ಸಮರ್ಪಕವಾಗಿ ನೀಡಿದ್ದಾರೆ ಎಂದಿದ್ದಾರೆ.



