ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಟ್ರಾಲ್ ಪ್ರದೇಶದ ನಾಡರ್‌ನಲ್ಲಿಇಂದು ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‌ಗೆ ಸೇರಿದ ಎರಡರಿಂದ ಮೂರು ಭಯೋತ್ಪಾದಕರು ಈ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿಲಾಗಿದೆ.
ಹೌದು ಆರಂಭಿಕ ವರದಿಗಳ ಪ್ರಕಾರ, ಈ ಪ್ರದೇಶದಲ್ಲಿ 2-3 ಉಗ್ರರು ಸಿಕ್ಕಿಬಿದ್ದಿದ್ದಾರೆ, ಸಂಘಟಿತ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಯುತ್ತಿದ್ದು, ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದು ಭಯೋತ್ಪಾದಕರನ್ನು ಬಂಧಿಸಿವೆ. ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಅವಂತಿಪೋರಾದ ನಾಡರ್, ಟ್ರಾಲ್ ಪ್ರದೇಶದಲ್ಲಿ ಎನ್ಕೌಂಟರ್ ಆರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿವೆ. ಹೆಚ್ಚಿನ ವಿವರಗಳು ನಂತರ ಬರಲಿವೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಅಘೋಷಿತ ಯುದ್ಧಕ್ಕೆ ವಿರಾಮ ಬಿದ್ದಿದ್ದರೂ ದೇಶದಲ್ಲಿ ಉಗ್ರರನ್ನು ಸದೆಬಡಿಯುವ ಕಾರ್ಯವನ್ನು ಸೇನೆ ಹಾಗೂ ಪೊಲೀಸರು ಮಾಡುತ್ತಿದ್ದಾರೆ.