ಶ್ರೀನಗರದಲ್ಲಿ ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರ ಎನ್ ಕೌಂಟರ್.!

0
Spread the love

ಶ್ರೀನಗರ: ʻಆಪರೇಷನ್‌ ಮಹಾದೇವ್‌ʼ ಅಡಿಯಲ್ಲಿ ನಡೆದ ಪ್ರಮುಖ ಕಾರ್ಯಾಚರಣೆ ಯೊಂದರಲ್ಲಿ ಮೂವರನ್ನು ಉಗ್ರರನ್ನು ಹತ್ಯೆ ಮಾಡಿದೆ. ಭಯೋತ್ಪಾದಕರಾದ ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಸಾವನ್ನಪ್ಪಿದ್ದು, ಈ ಮೂವರು ಏಪ್ರಿಲ್‌ 22ರ ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರೆಂದು ಶಂಕಿಸಲಾಗಿದೆ.

Advertisement

ಅಲ್ಲದೇ ಲಷ್ಕರ್‌ ಮುಖವಾಣಿ ಟಿಆರ್‌ಎಫ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ. ಸೇನೆಯ ಚಿನಾರ್ ಕಾರ್ಪ್ಸ್ ಕಂಪನಿ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಯಶಸ್ವಿ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನ ಹತ್ಯೆಗೈಯಲಾಗಿದೆ.

ಲಿಡ್ವಾಸ್‌ನ ದಚಿಗಮ್ ಶ್ರೀನಗರದ ಹೊರವಲಯದಲ್ಲಿರುವ ದಟ್ಟ ಅರಣ್ಯ ಪ್ರದೇಶವಾಗಿದೆ. ಇಲ್ಲಿನ ಬೆಟ್ಟದ ದುರ್ಗಮ ಹಾದಿಯು ಟ್ರಾಲ್‌ಗೆ ಸಂಪರ್ಕ ಕಲ್ಪಿಸುತ್ತದೆ. ಈ ಪ್ರದೇಶದಲ್ಲಿ‌ ಹಿಂದೆಯೂ ಟಿಆರ್‌ಎಫ್‌‌ ಉಗ್ರ ಸಂಘಟನೆಯ ಚಟುವಟಿಕೆಗಳು ನಡೆಯುತ್ತಿತ್ತು ಎಂದು ವರದಿಗಳು ತಿಳಿಸಿವೆ.


Spread the love

LEAVE A REPLY

Please enter your comment!
Please enter your name here