ಉತ್ತಮ ಕ್ರೀಡಾಪಟುಗಳಾಗಿ ದೇಶದ ಕೀರ್ತಿ ಹೆಚ್ಚಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸರಕಾರದ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಪಡೆದು, ಉತ್ತಮ ಕ್ರೀಡಾಪಟುಗಳಾಗಿ ದೇಶದ ಕೀರ್ತಿ ಹೆಚ್ಚಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಹೇಳಿದರು.

Advertisement

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಗದಗ, ಶಾಲಾ ಶಿಕ್ಷಣ ಇಲಾಖೆ ಗದಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಹರ ವಲಯ ಗದಗ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗದಗ ಶಹರ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಗದಗ ನಗರದ ದಿ. ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2025-26ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ, ಕ್ರೀಡಾಜ್ಯೋತಿ ಸ್ವೀಕರಿಸಿ ಅವರು ಮಾತನಾಡಿದರು.

ಮಕ್ಕಳ ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ. ಪ್ರತಿಯೊಂದು ಮಗುವೂ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಸರಕಾರ ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಆರೋಗ್ಯದ ಬಗ್ಗೆ ಚಿಂತನೆ ಮಾಡಿ ಪೌಷ್ಟಿಕಾಂಶಯುಕ್ತವಾದ ಆಹಾರವಾಗಿ ಬಿಸಿ ಊಟ, ಹಾಲು, ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣು ಇದರ ಜೊತೆಗೆ ಆರೋಗ್ಯ ತಪಾಸಣೆ ಮಾಡಿ, ಉಚಿತವಾಗಿ ಮಾತ್ರೆಗಳನ್ನು ನೀಡುವ ಮೂಲಕ ಸದೃಢ ಯುವ ಜನತೆಯನ್ನು ಹೊಂದಬೇಕೆಂಬುದು ಸರಕಾರದ ಚಿಂತನೆಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕ್ರೀಡಾ ಧ್ವಜಾರೋಹಣ ನೆರವೇರಿಸಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಚಿ ಮಾತನಾಡಿ, ಸೋಲು-ಗೆಲವು ಮುಖ್ಯವಲ್ಲ. ಕ್ರೀಡೆಯಲ್ಲಿ ಭಾಗವಹಿಸುವದು ಮುಖ್ಯ. ಅಂದಾಗ ಮಾತ್ರ ಆರೋಗ್ಯದ ಜೊತೆಗೆ ಸದೃಢವಾಗಲು ಸಾಧ್ಯ ಎಂದರು.

ಅತಿಥಿಗಳಾಗಿ ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವ್ಹಿ.ವ್ಹಿ. ನಡುವಿನಮನಿ, ಶಂಕರ ಹಡಗಲಿ, ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ. ಶೆಟ್ಟೆಪ್ಪನವರ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಎಸ್.ಪಿ. ಪ್ರಭಯ್ಯನಮಠ, ರಾಷ್ಟ್ರಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕರಾದ ಎಸ್.ಎನ್. ಬಳ್ಳಾರಿ, ಶರಣಪ್ಪ ನಾಗರಹಳ್ಳಿ, ಎಸ್.ಕೆ. ಮಂಗಳಗುಡ್ಡ, ಎಸ್.ಬಿ. ಮುಳಗುಂದ, ರವಿ ಕೋಟಿ, ಎಲ್.ಕೆ. ಚೌಕಿಮಠ, ಎಸ್.ಎಂ. ಮಾಶ್ಯಾಳ ಮುಂತಾದವರು ಉಪಸ್ಥಿತರಿದ್ದರು.

ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಶೆಟ್ಟೆಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಬಿ. ಮುಳಗುಂದ ಸ್ವಾಗತಿಸಿದರು. ಎಂ.ಎಸ್. ಕುಚಬಾಳ ನಿರೂಪಣೆ ಮಾಡಿದರು. ಶಹರ ವಲಯದ ದೈಹಿಕ ಶಿಕ್ಷಣಾಧಿಕಾರಿ ಜೆ.ಬಿ. ಅಣ್ಣಿಗೇರಿ ವಂದಿಸಿದರು. ಕ್ರೀಡಾಕೂಟದಲ್ಲಿ ಒಟ್ಟೂ 3650 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಗದಗ ಡಯಟ್‌ನ ಪ್ರಾಚಾರ್ಯರಾದ ಮಂಗಳಾ ತಾಪಸ್ಕರ ಮಾತನಾಡಿ, ಕ್ರೀಡೆಯಿಂದ ಮಕ್ಕಳು ಶಾರೀರಿಕವಾಗಿ ಸದೃಢವಾದಗ ಮಾತ್ರ ಸದೃಢ ಮನಸ್ಸು ಹೊಂದಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಸತತವಾಗಿ ಪಯತ್ನಿಸಿದಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದರು.


Spread the love

LEAVE A REPLY

Please enter your comment!
Please enter your name here