ಮತದಾನ ದಿನದ ಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಿ : ಅಜಯ ಗುಪ್ತಾ

0
meeting
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಆಗಮಿಸಿರುವ ಅಜಯ ಗುಪ್ತಾ ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಧಾರವಾಡ ಲೋಕಸಭಾ ಮತಕ್ಷೇತ್ರದ ಬಗ್ಗೆ ಮಾಹಿತಿ ಪಡೆದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನ್ವಯ ಮತದಾನ ಪೂರ್ವದ ಮತ್ತು ಮತದಾನ ದಿನದ ಸಿದ್ಧತೆಗಳನ್ನು ಖಚಿತಪಡಿಸಿಕೊಳ್ಳಬೇಕು.

ಚುನಾವಣಾಧಿಕಾರಿಗಳು ಸೇರಿದಂತೆ ಎಲ್ಲ ನಿಯೋಜಿತ ಅಧಿಕಾರಿಗಳು ಅನುಭವಿಕರಿದ್ದು, ಉತ್ತಮ ರೀತಿಯಲ್ಲಿ ಕಾರ್ಯ ಮಾಡುವಿರೆಂಬ ಭರವಸೆ ಇದೆ. ಚುನಾವಣೆಯ ಎಲ್ಲ ಕಾರ್ಯ ಸಿದ್ಧತೆಗಳನ್ನು ಪರಿಶೀಲಿಸಲಾಗಿದ್ದು, ನಿಯಮಾನುಸಾರವಿದೆ ಎಂದರು.

ಸುವಿಧಾ ಮತ್ತು ಸಿ-ವಿಜಲ್ ಆ್ಯಪ್ ಸೌಲಭ್ಯಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಿ, ಸಾರ್ವಜನಿಕರಲ್ಲಿ ಸುವಿಧಾ ಮತ್ತು ಸಿ-ವಿಜಿಲ್ ಬಳಕೆ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಧಾರವಾಡ ಮತಕ್ಷೇತ್ರದಲ್ಲಿ ಸಾರ್ವತ್ರಿಕ ಚುನಾವಣೆಯು ಶಾಂತಿಯುತ, ಮುಕ್ತ, ನ್ಯಾಯಸಮ್ಮತವಾಗಿ ಜರುಗಿಸಲು ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಸಿ-ವಿಜಿಲ್ ಮೂಲಕ ಇಲ್ಲಿಯವರೆಗೆ 1,757 ದೂರುಗಳು ಸ್ವೀಕೃತವಾಗಿದ್ದು, ನಿಗದಿತ 100 ನಿಮಿಷಗಳ ಕಾಲಮಿತಿಯಲ್ಲಿ ಎಲ್ಲ ದೂರುಗಳನ್ನು ನಿಯಮಾನುಸಾರ ಪರಿಹರಿಸಿ, ವಿಲೇವಾರಿ ಮಾಡಲಾಗಿದೆ. ಸುವಿಧಾ ಮೂಲಕ ಈವರೆಗೆ ಸಲ್ಲಿಸಿದ್ದ 135 ಅರ್ಜಿಗಳನ್ನು ಪರಿಶೀಲಿಸಿ, ನಿಯಮಾನುಸಾರ ಅನುಮತಿಸಿ, ವಿಲೇವಾರಿ ಮಾಡಲಾಗಿದೆ ಎಂದು ದಿವ್ಯ ಪ್ರಭು ತಿಳಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ ಮಾತನಾಡಿ, ಜಿಲ್ಲೆಯ ಎಲ್ಲ ನಗರಗಳಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ರಕ್ಷಣಾ ಪಡೆಯೊಂದಿಗೆ ಪಥ ಸಂಚಲನ ಮಾಡಿ, ಜನರಲ್ಲಿ ಸುವ್ಯವಸ್ಥಿತ ಚುನಾವಣೆಯ ಬಗ್ಗೆ ಆತ್ಮ ವಿಶ್ವಾಸ, ಸ್ಥೈರ್ಯ ಹೆಚ್ಚಿಸಲಾಗಿದೆ. ಜಿಲ್ಲೆಯಲ್ಲಿ ಶಾಂತಿಯುತ, ಸುವ್ಯವಸ್ಥಿತ, ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ, ಜಿಲ್ಲಾ ಪಂಚಾಯತ ಸಿಇಓ ಸ್ವೂರಪ ಟಿ.ಕೆ. ಮಾತನಾಡಿ, ಜಿಲ್ಲೆಯಾಂದ್ಯತ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಮತಕ್ಷೇತ್ರದಲ್ಲಿ ಶೇ. 75ಕ್ಕಿಂತ ಹೆಚ್ಚು ಮತದಾನ ಮಾಡಿಸುವ ಗುರಿ ಹೊಂದಲಾಗಿದೆ ಎಂದು

ಸಭೆಯಲ್ಲಿ ಮಾದರಿ ನೀತಿ ಸಂಹಿತೆ ಜಿಲ್ಲಾ ನೋಡಲ್ ಅಧಿಕಾರಿ ಮೋನಾ ರೋತ್, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಆದಾಯ ತೆರಿಗೆ ಇಲಾಖೆ ಅಧಿಕಾರಿ ಪಕೀರೇಶ ಬಾದಾಮಿ, ಜಿಲ್ಲಾ ವೆಚ್ಚ ನೋಡಲ್ ಅಧಿಕಾರಿ ವಿಶ್ವನಾಥ ಪಿ.ಬಿ., ಅಂಚೆ ಮತದಾನ ನೋಡಲ್ ಅಧಿಕಾರಿ ಮೋಹನ ಶಿವಣ್ಣವರ, ಸುವಿಧಾ ನೋಡಲ್ ಅಧಿಕಾರಿ ರೇಷ್ಮಾ ತಾಳಿಕೋಟಿ, ಜಿಲ್ಲಾಧಿಕಾರಿಗಳ ಕಚೇರಿ ನೋಡಲ್ ಅಧಿಕಾರಿ ಅನುರಾಧಾ ವಸ್ತçದ, ಸಿ-ವಿಜಿಲ್ ನೋಡಲ್ ಅಧಿಕಾರಿ ಅನೀಸ್ ನಾಯಕ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು, ಚುನಾವಣಾ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಮಾತನಾಡಿ, ಮಹಾನಗರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಮತ್ತು ಮುಕ್ತವಾಗಿ ಚುನಾವಣೆ ಜರುಗಿಸಲು ಅಗತ್ಯ ಬಂದೋಬಸ್ತ್ ಮಾಡಲಾಗಿದೆ.

ಪೊಲೀಸ್ ಸಿಬ್ಬಂದಿಯೊಂದಿಗೆ ಅರೆ ಸೇನಾ ಪಡೆ, ಮೀಸಲು ಪಡೆ, ಹೋಂ ಗಾರ್ಡ್ಗಳನ್ನು ನಿಯೋಜಿಸಲಾಗುತ್ತದೆ. ಲೈಸನ್ಸ್ ಪಡೆದಿರುವ 865 ಗನ್‌ಗಳನ್ನು ನಿಯಮಾನುಸಾರ ವಶಕ್ಕೆ ಪಡೆದು, ಆಯಾ ಪೊಲೀಸ್ ಠಾಣೆಗಳಲ್ಲಿ ಠೇವಣಿ ಮಾಡಲಾಗಿದೆ. 88 ಗನ್‌ಗಳಿಗೆ ಕಾನೂನು ಪ್ರಕಾರ ವಿನಾಯಿತಿ ನೀಡಲಾಗಿದೆ.

ಈಗಾಗಲೇ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿ ಆಗಿರುವ 21 ಜನ ಆರೋಪಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here