ಬೆಂಗಳೂರು: ನ್ಯೂ ಇಯರ್ ಸೆಲೆಬ್ರೇಷನ್‌ಗೆ ಕ್ಷಣಗಣನೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೊಸ ವರ್ಷದ ಸ್ವಾಗತಕ್ಕೆ ಸಿದ್ಧತೆಗಳು ನಡೆದಿವೆ. 2024ಕ್ಕೆ ಗುಡ್‌ಬೈ ಹೇಳಿ ಹೊಸ ವರ್ಷಕ್ಕೆ ವೆಲ್‌ಕಮ್ ಹೇಳಲು ರಾಜ್ಯಾದ್ಯಂತ ಜನರು ಸಜ್ಜಾಗಿದ್ದಾರೆ.
ಆದ್ದರಿಂದ ನ್ಯೂ ಇಯರ್ ಸೆಲೆಬ್ರೇಷನ್‌ಗೆ ಸಾಕಷ್ಟು ಮಂದಿ ಪ್ರವಾಸಿತಾಣಗಳಿಗೆ ಮುಗಿಬೀಳುತ್ತಿದ್ದಾರೆ. ಆದರೆ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಹೌದು ಪ್ರವಾಸಿಗರ ಹಾಟ್‌ಸ್ಪಾಟ್ ಚಿಕ್ಕಳ್ಳಾಪುರದ ನಂದಿಬೆಟ್ಟ ಪ್ರವೇಶಕ್ಕೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 7 ಗಂಟೆ ವರೆಗೆ ನಿರ್ಬಂಧ ಹೇರಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಂಜೆ 7ಗಂಟೆ ನಂತರ ಪ್ರವಾಸಿಗರಿಗೆ ನಿರ್ಬಂಧ ಇರಲಿದ್ದು,
ಜನವರಿ 1ರಂದು ಎಂದಿನಂತೆ ತೆರಳಬಹುದು. ಇನ್ನು ಕೆಆರ್ಎಸ್ ಹಿನ್ನೀರು, ಬಲಮುರಿ, ಎಡಮುರಿ, ಕಾವೇರಿ ನದಿ ತೀರ ಪ್ರವೇಶಕ್ಕೆ ಜನವರಿ 1ರ ರಾತ್ರಿವರೆಗೂ ನಿರ್ಬಂಧ ಹೇರಲಾಗಿದೆ. ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ತೀರದಲ್ಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.