ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಗಂಗಾಪೂರ ಪೇಟೆಯಲ್ಲಿರುವ ಶ್ರೀ ದುರ್ಗಾದೇವಿ ಶಿಕ್ಷಣ ಸಮಿತಿಯಲ್ಲಿ ಬುಧವಾರ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಎಚ್.ಎಂ. ನದಾಫ್ ಅವರು ಮಕ್ಕಳಿಗೆ ಪರಿಸರದ ಮಹತ್ವದ ಕುರಿತು ತಿಳಿ ಹೇಳಿ, ಪ್ರತಿಯೊಬ್ಬರೂ ಸಸಿ ನೆಡುವ ಮೂಲಕ ಪರಿಸರವನ್ನು ರಕ್ಷಣೆ ಮಾಡಬೇಕೆಂದು ಹೇಳಿದರು.
Advertisement
ಈ ಸಂದರ್ಭದಲ್ಲಿ ಸಹ ಶಿಕ್ಷಕಿಯರಾದ ಎಂ.ಎಂ. ಹಿಡ್ಕಿಮಠ, ರೇಖಾ ಅಂಗಡಿ, ವಿ.ವಿ. ಕಲ್ಮನಿ, ಜೆ.ವಿ. ಅರಸಿದ್ದಿ, ಬಿ.ಎ. ಬಳ್ಳಾರಿ ಹಾಗೂ ಸಿಬ್ಬಂದಿಗಳಾದ ಲಕ್ಷ್ಮಿ ಕಮಡೊಳ್ಳಿ, ಸೈನಾಜಬಾನು ರೋಣ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.