HomeGadag Newsವನ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಬಸವರಾಜ

ವನ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಬಸವರಾಜ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗಾಳಿ, ನೀರು, ಭೂಮಿ ಸೇರಿದಂತೆ ಪರಿಸರ ಮಾಲಿನ್ಯವಾಗುವುದರಿಂದ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಗಿಡ-ಮರಗಳನ್ನು ಬೆಳೆಸುವ ಮೂಲಕ ನಮ್ಮ ಪರಿಸರದ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ನುಡಿದರು.

ಅವರು ಸಮೀಪದ ಬಿಂಕದಕಟ್ಟಿ ಗ್ರಾಮದ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ `ಜನ-ವನ, ಒಬ್ಬರಿಗೊಂದು ಮರ’ ಧ್ಯೇಯ ವಾಕ್ಯದೊಂದಿಗೆ ಪ್ರತಿ ತಾಲೂಕಿನಲ್ಲಿ 10 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಡುವ ಸಂಕಲ್ಪದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರ ಎಸ್ ಶೆಟ್ಟಿ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಕಾಶೀಮ ಚೂರಿಖಾನ, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್‌ಎಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ, ಪ್ರಧಾನ ಹಿರಿಯ ದಿವಾಣಿ ನ್ಯಾಯಾದೀಶರು ವ ಸಿಜೆಎಂ ಜಿ.ಆರ್. ಶೆಟ್ಟರ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರರಾದ ಎಸ್.ಎಸ್. ತಳವಾರ, 1ನೇ ಜೆಎಂಎಫ್‌ಸಿ ನ್ಯಾಯಾಲಯದ ದಿವಾಣಿ ನ್ಯಾಯಾದೀಶರಾದ ಬಿ.ವೈ. ಕರಗುದರಿ, 2ನೇ ಜೆಎಂಎಫ್‌ಸಿ ನ್ಯಾಯಾಲಯದ ದಿವಾಣಿ ನ್ಯಾಯಾದೀಶರಾದ ದೀಪ್ತಿ ನಾಡಗೌಡ, 3ನೇ ಜೆಎಂಎಫ್‌ಸಿ ನ್ಯಾಯಾಲಯದ ದಿವಾಣಿ ನ್ಯಾಯಾದೀಶರಾದ ಭೀಮಪ್ಪ ಪೋಳ, 4ನೇ ಜೆಎಂಎಫ್‌ಸಿ ನ್ಯಾಯಾಲಯದ ದಿವಾಣಿ ನ್ಯಾಯಾದೀಶರಾದ ಬೀರಪ್ಪ ಕಾಂಬಳೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಂ.ಐ. ಹಿರೇಮನಿಪಾಟೀಲ, ಕಾರ್ಯದರ್ಶಿ ಬಿ.ಎಚ್. ಮಾಡಲಗೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ ಮೀನಾ ಪ್ರಾಸ್ತಾವಿಕ ಮಾತನಾಡಿದರು, ಬಾಹುಬಲಿ ಜೈನರ ನಿರೂಪಿಸಿದರು.

ಪ್ರತಿ ಮನೆಗೊಂದು ಮರ, ಊರಿಗೊಂದು ವನ ಇರಬೇಕು. ಈ ಬಗ್ಗೆ ಗಮನ ಹರಿಸಿ, ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪಾಲನೆ ಪೋಷಣೆ ಮಾಡಬೇಕು. ರೈತರು ತಮ್ಮ ಜಮೀನಿನ ಬದುಗಳಲ್ಲಿ ಮರಗಳನ್ನು ಹೆಚ್ಚಾಗಿ ಬೆಳೆಸಬೇಕು. ಕಾಡಿನ ಸಂರಕ್ಷಣೆ, ಗಿಡ ಮರಗಳನ್ನು ಬೆಳೆಸುವುದು ಕೇವಲ ಅರಣ್ಯ ಇಲಾಖೆಯ ಕೆಲಸವಲ್ಲ, ಅದು ಪ್ರತಿಯೊಬ್ಬರ ಕರ್ತವ್ಯ ಎಂದು ನ್ಯಾಯಾಧೀಶರಾದ ಬಸವರಾಜ ನುಡಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!