HomeGadag Newsಸಮಾನತೆ ಮತ್ತು ಸಾಮಾಜಿಕ ನ್ಯಾಯವೇ ಸಂವಿಧಾನದ ಸಂದೇಶ: ಡಾ. ತೋಂಟದ ಸಿದ್ದರಾಮ ಶ್ರೀಗಳು

ಸಮಾನತೆ ಮತ್ತು ಸಾಮಾಜಿಕ ನ್ಯಾಯವೇ ಸಂವಿಧಾನದ ಸಂದೇಶ: ಡಾ. ತೋಂಟದ ಸಿದ್ದರಾಮ ಶ್ರೀಗಳು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟçವಾಗಿರುವ ಭಾರತದ ಆತ್ಮವೇ ನಮ್ಮ ಸಂವಿಧಾನ. ನಮ್ಮ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನವಾದ ಅವಕಾಶಗಳನ್ನು ಕಲ್ಪಿಸಲಾಗಿದೆ. ಸಮಾನತೆ ಮತ್ತು ಸಾಮಾಜಿಕ ನ್ಯಾಯವೇ ಸಂವಿಧಾನದ ಸಂದೇಶವಾಗಿದೆ ಎಂದು ಡಾ. ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಹೇಳಿದರು.

ಲಿಂಗಾಯತ ಪ್ರಗತಿಶೀಲ ಸಂಘದ 2722ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಸಂವಿಧಾನ ಎಷ್ಟೇ ಪ್ರಬಲವಾಗಿದ್ದರೂ ಅದನ್ನು ಜಾರಿಗೆ ತರುವವರು ದುರ್ಬಲವಾಗಿದ್ದರೆ, ಪ್ರಬಲ ಸಂವಿಧಾನವು ಕೂಡ ದುರ್ಬಲವಾಗುತ್ತದೆ. ಧರ್ಮದ ಹೆಸರಿನಲ್ಲಿ ಸಂವಿಧಾನಕ್ಕೆ ಅಪಚಾರ ಮಾಡಬಾರದು. ಅನೇಕ ಧರ್ಮ, ಭಾಷೆ, ಜಾತಿ, ಮತಗಳನ್ನು ಒಳಗೊಂಡ ವೈವಿಧ್ಯಮಯ ದೇಶ ನಮ್ಮದು ಎಂದು ಶ್ರೀಗಳು ಹೇಳಿದರು.

ಮುಖ್ಯ ಅತಿಥಿಗಳಾಗಿ ಗದಗ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿಯವರು ಉಪಸ್ಥಿತರಿದ್ದರು. ಗುರುನಾಥ ಸುತಾರ ಹಾಗೂ ಸವಿತಾ ಗುಡ್ಡದ ಅವರಿಂದ ವಚನ ಸಂಗೀತ ನಡೆಯಿತು. ಧರ್ಮಗ್ರಂಥ ಪಠಣವನ್ನು ದಿನ್ನಿಯವರು, ವಚನ ಚಿಂತನವನ್ನು ಉಮಾ ಬಸನಗೌಡ ಬಿನ್ನಾಳವರು ನಡೆಸಿಕೊಟ್ಟರು. ದಾಸೋಹ ಸೇವೆಯನ್ನು ನಿವೃತ್ತ ಪಿ.ಎಸ್.ಐ ಎಚ್.ಎಚ್. ನೀಲಗುಂದ ವಹಿಸಿಕೊಂಡಿದ್ದರು.

ಎA.ಎA. ರಡ್ಡೇರ, ಅಂದಾನಪ್ಪ ವಡಿಗೇರಿ, ಜಿ.ಎಲ್. ಬಾರಾಟಕ್ಕೆ, ವಿ.ವಿ. ನಡುವಿನಮನಿ, ಶಂಕರ್ ಹಡಗಲಿ, ಎಂ.ಎಸ್. ಕಂಬಳಿ ಉಪಸ್ಥಿತರಿದ್ದರು. ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ ಸ್ವಾಗತಿಸಿದರು. ಮಂಜುಳಾ ಹಾಸಲಕರ ನಿರೂಪಿಸಿದರು. ಐ.ಬಿ. ಬೆನಕೊಪ್ಪ ಅತಿಥಿಗಳನ್ನು ಪರಿಚಯಿಸಿದರು. ಉಪಾಧ್ಯಕ್ಷ ಡಾ. ಉಮೇಶ ಪುರದ, ಕಾರ್ಯದರ್ಶಿ ವೀರಣ್ಣ ಗೋಟಡಕಿ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಉಪನ್ಯಾಸಕರಾಗಿ ಆಗಮಿಸಿದ ಕರ್ನಾಟಕ ರಾಜ್ಯ ಸಂಸ್ಥೆ ಸಿಸ್ಲೆಪ್ ಧಾರವಾಡದ ನಿರ್ದೇಶಕರಾದ ಡಾ. ಬಿ.ಕೆ.ಎಸ್. ವರ್ಧನ್ ಮಾತನಾಡುತ್ತಾ, ಡಾ. ಬಿ.ಆರ್. ಅಂಬೇಡ್ಕರರು ರಚಿಸಿದ ಭಾರತದ ಸಂವಿಧಾನವನ್ನು 1949 ನವೆಂಬರ್ 26ರಂದು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ. ಅಂತೇಯೇ ಈ ದೇಶದ ಕಟ್ಟಕಡೆಯ ಹಳ್ಳಿಯ ಮನುಷ್ಯನು ಇಂದು ಪವಿತ್ರ ವೇದಿಕೆಯಲ್ಲಿ ನಿಂತು ಮಾತನಾಡುವ ಸ್ವಾತಂತ್ರ್ಯವನ್ನು ನಮ್ಮ ಸಂವಿಧಾನ ಕೊಟ್ಟಿದೆ. ಸರ್ವಧರ್ಮಗಳಿಗೂ ಸ್ವಾತಂತ್ರ್ಯ-ಸಮಾನತೆ ಮತ್ತು ಭಾತೃತ್ವ ಭಾವದಿಂದ ಮುನ್ನಡೆಯುವ ಅಂಶಗಳನ್ನು ನಮ್ಮ ಸಂವಿಧಾನ ಒಳಗೊಂಡಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!