ಬಸವಾದಿ ಶಿವಶರಣರಿಂದ ಸಮಾನತೆಯ ಸಂದೇಶ

0
shivanubhava
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಇಂದಿನ ಮಹಿಳೆಯರು ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಗಣನೀಯ ಸಾಧನೆ ಮಾಡುತ್ತಿದ್ದಾರೆ. ಇದಕ್ಕೆ ಕಾರಣ ಮಹಿಳೆಯರಿಗೆ ಶಿಕ್ಷಣದಲ್ಲಿ ಸಮಾನತೆ ಕಲ್ಪಿಸಿದ್ದು. ಒಂದು ಕಾಲದಲ್ಲಿ ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿದ್ದರು. ಹೆಣ್ಣು-ಗಂಡು ತಾರತಮ್ಯ ಇತ್ತು. ಬಸವಾದಿ ಶಿವಶರಣರು ಈ ಬೇಧವನ್ನಳಿದು ಸಮಾನತೆಯ ಸಂದೇಶ ಸಾರಿದರು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ನುಡಿದರು.

Advertisement

ಇಲ್ಲಿನ ಲಿಂಗಾಯತ ಪ್ರಗತಿಶೀಲ ಸಂಘದ 2684ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.

ಜಿಲ್ಲಾ ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಸುಧಾ ಹುಚ್ಚಣ್ಣವರ ಉಪನ್ಯಾಸ ನೀಡಿ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಮಹಿಳೆ ಮುಂದುವರೆಯುವ ಅನಿವಾರ್ಯತೆ ಇದೆ. ಮೊಟ್ಟಮೊದಲ ಕವಯಿತ್ರಿ ಅಕ್ಕಮಹಾದೇವಿ ಅನೇಕ ವಚನಗಳನ್ನು ರಚಿಸಿದರು. ಸಂಚಿಯ ಹೊನ್ನಮ್ಮ ಹದಿಬದೆಯ ಧರ್ಮ ಕೊಟ್ಟವರು. ಹೆಣ್ಣು ಜಗದ ಕಣ್ಣು. 12ನೇ ಶತಮಾನದ ಶಿವಶರಣೆಯರ ಸಮಾಜಿಕ ಪ್ರಜ್ಞೆ, ತತ್ವಾದರ್ಶಗಳು ಪ್ರಸ್ತುತ ಮಹಿಳೆಯರಿಗೆ ಮಾದರಿ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದರು. ಮುಖ್ಯಅತಿಥಿಗಳಾಗಿ ಚನ್ನಬಸಪ್ಪ ಕಂಠಿ, ಸುಧಾ ಹುಚ್ಚಣ್ಣವರ ಭಾಗವಹಿಸಿದ್ದರು.

ಹೇಮಾವತಿ ಶ್ರೀಕಾಂತ ಹೂಲಿ ವಚನ ಸಂಗೀತ ಹಾಡಿದರು. ಗುರುನಾಥ ಸುತಾರ ತಬಲಾ ಸಾಥ್ ನೀಡಿದರು.

ಧರ್ಮಗ್ರಂಥ ಪಠಣವನ್ನು ಅನ್ವಿತಾ ಆರ್.ಪಾಟೀಲ, ವಚನ ಚಿಂತನೆಯನ್ನು ವೈಭವಿ ಎಸ್.ಗಾಣಿಗೇರ ಮಾಡಿದರು. ಶಿವಾನುಭವದ ದಾಸೋಹ ಭಕ್ತಿಸೇವೆಯನ್ನು ವಹಿಸಿಕೊಂಡಿದ್ದ ಜಿಲ್ಲಾ ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಪೂಜ್ಯರು ಸಂಮಾನಿಸಿದರು.

ಸರ್ವರನ್ನು ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರ ಸ್ವಾಗತಿಸಿದರು. ರತ್ನಕ್ಕ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಬಾಲಚಂದ್ರ ಭರಮಗೌಡರ, ರೇಣುಕಾ ವಿ.ಕರೇಗೌಡ್ರ, ಕಾರ್ಯದರ್ಶಿ ಮಹೇಶ ಗಾಣಿಗೇರ, ಸಹಕಾರ್ಯದರ್ಶಿ ವಿಜಯಕುಮಾರ ಹಿರೇಮಠ, ವಿರುಪಾಕ್ಷಪ್ಪ ಅರಳಿ, ಸಂಘಟನಾ ಕಾರ್ಯದರ್ಶಿ ಅಶೋಕ ಹಾದಿ, ಕೋಶಾಧ್ಯಕ್ಷ ಸುರೇಶ ನಿಲೂಗಲ್, ಶಿವಾನುಭವ ಸಮಿತಿ ಚೇರಮನ್ ವಿವೇಕಾನಂದಗೌಡ ಪಾಟೀಲ ಉಪಸ್ಥಿತರಿದ್ದರು.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ನಿಮಿತ್ತ ಡಾ. ತೇಜ ಚನ್ನಯ್ಯ ಹಿರೇಮಠ, ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ‘ಸುವರ್ಣ ಸಾಧಕ’ ಪ್ರಶಸ್ತಿ ಪುರಸ್ಕೃತರಾದ ನಿಮಿತ್ತ ಬಲರಾಮಸಾ ಷಣ್ಮುಖಸಾ ಬಸವಾ ಅವರನ್ನು ಸನ್ಮಾನಿಸಲಾಯಿತು.


Spread the love

LEAVE A REPLY

Please enter your comment!
Please enter your name here