ತಪ್ಪಿಸಿಕೊಳ್ಳಲು ಯತ್ನ: ರೌಡಿ ಶೀಟರ್‌ ಮೇಲೆ ಗುಂಡು ಹಾರಿಸಿದ ಪೊಲೀಸ್‌

0
Spread the love

ತುಮಕೂರು: ತುಮಕೂರು ನಗರದ ದಿಬ್ಬೂರು ಬಳಿ  ಸ್ಥಳ ಮಹಜರು ಮಾಡಲು ಸ್ಥಳಕ್ಕೆ ಕರೆದೊಯ್ದ ವೇಳೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್‌ ಮಾಡಿರುವ ಘಟನೆ ನಡೆದಿದೆ. ಪ್ರಕರಣವೊಂದರ ಸ್ಥಳ ಮಹಜರು ಮಾಡಲು ರೌಡಿ ಶೀಟರ್‌ ಮನು ಎಂಬಾತನನ್ನು ಸ್ಥಳಕ್ಕೆ ಕರೆದೊಯ್ಯಲಾಗಿತ್ತು.  ಈ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

Advertisement

ಈ ವೇಳೆ ತುಮಕೂರು ನಗರ ಪೊಲೀಸ್ ಠಾಣೆ ಸಿಪಿಐ ದಿನೇಶ್ ಅವರು ರೌಡಿಶೀಟರ್ ಮನು ಕಾಲಿಗೆ ಗುಂಡು ಹಾರಿಸಿದ್ದಾರೆ. ಹೀಗಾಗಿ ರೌಡಿ ಶೀಟರ್ ಕಾಲಿಗೆ ಗುಂಡೇಟು ತಗುಲಿದೆ. ಘಟನೆಯಲ್ಲಿ ಪೊಲೀಸರೂ ಕೂಡ ಗಾಯಗೊಂಡಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ರೌಡಿಶೀಟರ್ ಮನು ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ. ಗಾಯಾಳು ಪೊಲೀಸ್ ಸಿಬ್ಬಂದಿ ಹಾಗೂ ರೌಡಿಶೀಟರ್ ಮನುಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here