ಬೆಂಗಳೂರು: ಸ್ವಾತಂತ್ರ‍್ಯ ಬಂದು 75 ವರ್ಷ ಕಳೆದರೂ ಕಾಂಗ್ರೆಸ್‌ನ ಕಳ್ಳರು ದಲಿತರನ್ನು ಉದ್ಧಾರ ಮಾಡಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದಲಿತರ ಬಗ್ಗೆ ಮಾತಾಡುವಾಗಲೆಲ್ಲ ಅವರು ತುಳಿತಕ್ಕೆ ಒಳಗಾದವರು ಎಂದು ಹೇಳುತ್ತೇವೆ.
ಆದರೆ ಈ ರೀತಿ ತುಳಿದವರು ಯಾರು ಎಂದು ಪ್ರಶ್ನೆ ಮಾಡಿದರೆ, ಕಾಂಗ್ರೆಸ್‌ನವರೇ ಎಂಬ ಉತ್ತರ ಸಿಗುತ್ತದೆ. ಇಷ್ಟು ವರ್ಷ ಶೋಷಿತರನ್ನು ಕಾಂಗ್ರೆಸ್‌ನವರೇ ತುಳಿದಿದ್ದಾರೆ. ಸ್ವಾತಂತ್ರ‍್ಯ ಬಂದು 75 ವರ್ಷ ಕಳೆದರೂ ಕಾಂಗ್ರೆಸ್‌ನ ಕಳ್ಳರು ದಲಿತರನ್ನು ಉದ್ಧಾರ ಮಾಡಲಿಲ್ಲ ಎಂದು ಕಿಡಿಕಾರಿದರು.
ಬಾಬಾ ಸಾಹೇಬ್ ಅಂಬೇಡ್ಕರ್‌ರ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿ ಅಂಬೇಡ್ಕರರ ಜೀವನದ ಪ್ರಮುಖ ಸ್ಥಳಗಳನ್ನು ಪಂಚತೀರ್ಥವೆಂದು ಯಾತ್ರಾ ಸ್ಥಳವಾಗಿಸಿದರು. ಕಾಂಗ್ರೆಸ್ ನಾಯಕರು ತಾವು ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರಿಗೆ ಮೋಸ ಮಾಡುತ್ತಾರೆ ಎಂದು ದೂರಿದರು.