ವಿಜಯಪುರ: ಬಸನಗೌಡ ಯತ್ನಾಳ್ ಇಚ್ಛಿಸಿದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳೋದು ಕಷ್ಟ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರಿಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ,
Advertisement
ಅವರು ಕಾಂಗ್ರೆಸ್ ಪಕ್ಷ ಸೇರುತ್ತೇನೆಂದರೂ ಸೇರಿಸಿಕೊಳ್ಳೋದು ಬಹಳ ಕಷ್ಟ, ಯಾಕೆಂದರೆ ಅವರು ಒಂದು ನಿರ್ದಿಷ್ಟ ಸಮುದಾಯದ ಬಗ್ಗೆ ಬಹಳ ಕೆಟ್ಟದ್ದಾಗಿ, ಅಸಹ್ಯ ಮತ್ತು ಕೀಳಾಗಿ ಮಾತಾಡಿದ್ದಾರೆ, ಹಾಗಾಗಿ ಅವರಿಗೆ ತಮ್ಮ ಪಕ್ಷದಲ್ಲಿ ಸ್ಥಾನ ಸಿಗಲಾರದು ಎಂದು ಹೇಳಿದರು.
ಇನ್ನೂ ಇದೇ ವೇಳೆ ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಸುಪಾರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಪ್ರಕರಣ ನೋಡಿಕೊಳ್ಳಲು ಗೃಹ ಸಚಿವರು, ಪೊಲೀಸರು ಇದ್ದಾರೆ. ಅವರು ಪ್ರಕರಣವನ್ನ ಬಯಲಿಗೆ ಎಳೆಯುತ್ತಾರೆ ಎಂದಿದ್ದಾರೆ.