ಹುಬ್ಬಳ್ಳಿ: ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲುವುದು ನಾವೇ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲುವುದು ನಾವೇ ಎಂದು ಹೇಳಿದರು.
ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವಿದೆ. ಪ್ರಚಾರ ವೇಳೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹಾಗಾಗಿ ಎನ್ಡಿಎ ಅಭೂತಪೂರ್ವ ಗೆಲುವು ಸಾಧಿಸಲಿದೆ. ಸಂಡೂರು, ಶಿಗ್ಗಾವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.



