ಬೆಂಗಳೂರು:- ಕಾಂಗ್ರೆಸ್ ಹೈಕಮಾಂಡ್ ನಾಯಕ ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾರ್ಮಿಕ ಸಂದೇಶ ಪ್ರಕಟಿಸಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
ನೀವೇನು ಚಿಂತೆ ಮಾಡಬೇಡಿ. ನಿಮ್ಮನ್ನು ಶೀಘ್ರವೇ ದೆಹಲಿಗೆ ಕರೆಸಿಕೊಳ್ಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಮೈಸೂರಿನಲ್ಲಿ ಹೈಕಮಾಂಡ್ ನಾಯಕ, ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ ಎನ್ನಲಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ, ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ ಒಂದನ್ನು ಹಂಚಿಕೊಂಡಿದ್ದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಸಿಎಂ ಆಗುವ ಸುಳಿವು ಕೊಟ್ಟರಾ ಡಿಸಿಎಂ ಎಂಬ ಪ್ರಶ್ನೆಯೂ ಮೂಡಿದೆ.
ಇಂದು ಬೆಳಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಡಿಕೆ ಶಿವಕುಮಾರ್, ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ. ಸಿಎಂ ಸ್ಥಾನದ ಚರ್ಚೆಗಳ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಿಗ್ ಹಿಂಟ್ ಕೊಟ್ಟರಾ ಎಂಬ ಪ್ರಶ್ನೆ ಮೂಡಿಸಿದೆ.
ಡಿಕೆ ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಹೇಳಿದ್ದೇನು?
ಮೈಸೂರು ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಯವರನ್ನು ಸೈಡ್ಗೆ ಕರೆದುಕೊಂಡು ಹೋಗಿದ್ದ ಡಿಕೆ ಶಿವಕುಮಾರ್ ತುಸು ಹೊತ್ತು ಗಂಭೀರವಾಗಿ ಚರ್ಚಿಸುತ್ತಿರುವುದು ಕಂಡುಬಂದಿತ್ತು. ಅದಾದ ನಂತರ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಜತೆಗೂ ಮಾತುಕತೆ ನಡೆಸಿದ್ದರು. ಈ ಬೆಳವಣಿಗೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಮಾತ್ರವಲ್ಲದೆ, ರಾಜ್ಯ ರಾಜಕಾರಣದಲ್ಲೂ ಸಂಚಲನ ಮೂಡಿಸಿತ್ತು. ಇದೀಗ, ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ ಹಂಚಿಕೊಂಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.



