ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೆಲವು ಕೈದಿಗಳಿಗೆ ವಿಶೇಷ ಸೌಲಭ್ಯಗಳು ಲಭ್ಯವಾಗುತ್ತಿವೆ ಎಂಬ ಆರೋಪಗಳು ಇದೀಗ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿವೆ. ನಟ ದರ್ಶನ್ ಅವರಿಗೆ ಕನಿಷ್ಠ ಹಾಸಿಗೆ ಮತ್ತು ದಿಂಬು ಪಡೆಯಲು ಕಷ್ಟವಾಗುತ್ತಿರುವ ಸಂದರ್ಭದಲ್ಲಿ, ಮೋಸ್ಟ್ ವಾಂಟೆಡ್,
Advertisement
ಐಸಿಸ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾಗೆ ರಾಜಾತಿಥ್ಯ ನೀಡಿರುವುದು ವೈರಲ್ ಆಗಿರುವ ವಿಡಿಯೋದಿಂದ ಬೆಳಕಿಗೆ ಬಂದಿದೆ.
ಶಕೀಲ್ ರಾಜಾರೋಷವಾಗಿ ಜೈಲಿನಲ್ಲಿ ಮೊಬೈಲ್ ಫೋನ್ ಇಟ್ಕೊಂಡು ಮಾತನಾಡುತ್ತಿರೋದು ವಿಡಿಯೋದಲ್ಲಿ ಗೊತ್ತಾಗಿದೆ. ಹೀಗಾಗಿ ಬೆಂಗಳೂರು ಸೆಂಟ್ರಲ್ ಜೈಲು ಭಯೋತ್ಪಾದಕರಿಗೂ ಸ್ವರ್ಗವಾಯ್ತಾ ಅನ್ನೋ ಪ್ರಶ್ನೆ ಮೂಡಿದೆ.
ಇದರ ಜೊತೆಗೆ ಉಮೇಶ್ ರೆಡ್ಡಿ ಮತ್ತು ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಮೊಬೈಲ್ ಫೋನ್‌ಗಳನ್ನು ಆರಾಮವಾಗಿ ಬಳಸುತ್ತಿರುವುದು ಕಂಡುಬಂದಿದೆ.


