ನವದೆಹಲಿ:- ಪ್ರತಿ ಜಿಲ್ಲೆಗೊಂದು ‘ಮಾದರಿ ಸೌರ ಗ್ರಾಮ’ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ದೇಶಾದ್ಯಂತ ಪ್ರತಿ ಜಿಲ್ಲೆಗೆ ಒಂದು ಮಾದರಿ ಸೌರ ಗ್ರಾಮವನ್ನು ರಚಿಸಲು ಒತ್ತು ನೀಡಿದ್ದು, ಇದಕ್ಕಾಗಿ ಒಟ್ಟು ರೂ. 800 ಕೋಟಿ ಆರ್ಥಿಕ ವೆಚ್ಚವನ್ನು ನಿಗದಿಪಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಸೌರ ಮಾದರಿ ಗ್ರಾಮದಲ್ಲಿ ಪ್ರತಿ ಜಿಲ್ಲೆಯ ವಿಜೇತ ಗ್ರಾಮವು ಕೇಂದ್ರದಿಂದ ಹಣಕಾಸು ನೆರವಾಗಿ ರೂ. 1 ಕೋಟಿ ಅನುದಾನ ಪಡೆಯುತ್ತದೆ ಎಂದು ಮಾಹಿತಿ ನೀಡಿರುವ ಸಚಿವ ಪ್ರಲ್ಹಾದ್ ಜೋಶಿ, ಸೌರಶಕ್ತಿ ಅಳವಡಿಕೆಯನ್ನು ಉತ್ತೇಜಿಸುವ ಮತ್ತು ಗ್ರಾಮ ಸಮುದಾಯಗಳನ್ನು ಸ್ವಾವಲಂಬಿಯಾಗಿಸುವ ನಿಟ್ಟಿನಲ್ಲಿ ಈ ಹೆಜ್ಜೆ ಇರಿಸಿ ಮಾದರಿ ಸೌರ ಗ್ರಾಮ ರಚಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.
ಸೌರ ಮೇಲ್ಛಾವಣಿಯ ಸೂರ್ಯ ಘರ್ ಯೋಜನೆ 75,021 ಕೋಟಿ ರೂ. ವೆಚ್ಚವನ್ನು ಹೊಂದಿದ್ದು, 2026-27ರ ಆರ್ಥಿಕ ವರ್ಷದವರೆಗೆ ಅನ್ವಯಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.


