ನವದೆಹಲಿ: ಜನಸಂಖ್ಯಾ ನಿಯಂತ್ರಣ ಅತ್ಯವಶ್ಯವಾಗಿದ್ದರೂ, ಪ್ರತಿಯೊಬ್ಬ ಭಾರತೀಯ ದಂಪತಿಗಳು ಮೂರು ಮಕ್ಕಳನ್ನು ಹೊಂದುವುದು ಸೂಕ್ತ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋಹನ್ ಭಾಗವತ್,
ಮೂರಕ್ಕಿಂತ ಕಡಿಮೆ ಜನನ ದರ ಹೊಂದಿರುವ ಸಮುದಾಯಗಳು ನಿಧಾನವಾಗಿ ನಶಿಸಿ ಹೋಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಆದ್ದರಿಂದ ಭಾರತೀಯ ದಂಪತಿಗಳು ಮೂರಕ್ಕಿಂತ ಹೆಚ್ಚಿನ ಜನನ ಪ್ರಮಾಣವನ್ನು ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸರಿಯಾದ ವಯಸ್ಸಿನಲ್ಲಿ ಮದುವೆಯಾಗಿ ಮೂರು ಮಕ್ಕಳನ್ನು ಹೆರುವುದರಿಂದ, ಪೋಷಕರು ಮತ್ತು ಮಕ್ಕಳು ಇಬ್ಬರೂ ಆರೋಗ್ಯವಾಗಿರುತ್ತಾರೆ ಎಂದು ವೈದ್ಯರು ನನಗೆ ಹೇಳಿದ್ದಾರೆ. ಮೂವರು ಒಡಹುಟ್ಟಿದವರಿರುವ ಮನೆಗಳಲ್ಲಿರುವ ಮಕ್ಕಳು ಸಹ ಅಹಂ ನಿರ್ವಹಣೆಯನ್ನು ಕಲಿಯುತ್ತಾರೆ ಮತ್ತು ಭವಿಷ್ಯದಲ್ಲಿ ಅವರ ಕುಟುಂಬ ಜೀವನದಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ.