ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ಅಡವಿಸೋಮಾಪುರ ಗ್ರಾಮದಲ್ಲಿ ಕಳೆದ ಚುನಾವಣೆಗಳಲ್ಲಿ ಕಡಿಮೆ ಮತದಾನವಾದ ಕೇಂದ್ರಗಳಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಳೆದ ಚುನಾವಣೆಗಿಂತ ಈ ಸಲ ಹೆಚ್ಚಿನ ಮತದಾನ ಆಗಬೇಕು. ಆದ್ದರಿಂದ ಗ್ರಾಮದ ಜನರಲ್ಲಿ ಜಾಗೃತಿ ಮೂಡಿಸುವುದು ತುಂಬಾ ಅವಶ್ಯಕ ಎಂದು ತಾಲೂಕು ಸ್ವೀಪ್ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ ಹೇಳಿದರು.
ಸಹಾಯಕ ನಿರ್ದೇಶಕ ಕುಮಾರ ಪೂಜಾರ ಮಾತನಾಡಿ, ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಧೈರ್ಯದಿಂದ ನಿಮ್ಮ ಮತದಾನದ ಹಕ್ಕು ಚಲಾಯಿಸಬೇಕು. ಹೆಚ್ಚೆಚ್ಚು ಮತದಾನ ಆಗುವಂತೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಹಾಜರಿದ್ದರು ಸರ್ವ ಸಿಬ್ಬಂದಿಗಳು ಮಾನವ ಸರಪಳಿ ನಿರ್ಮಿಸಿ ಗ್ರಾಮದ ಜನರಲ್ಲಿ ಮತದಾನ ಜಾಗೃತಿ ಮೂಡಿಸಿದರು. ಈ ವೇಳೆ ಪಂಚಾಯತ ಅಭಿವೃದ್ಧಿ ಅಧಿಕಾರಿ, ಪಂಚಾಯತ ಸಿಬ್ಬಂದಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಆಶಾ ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಹಾಜರಿದ್ದರು.