ಸೋಷಿಯಲ್ ಮೀಡಿಯಾದಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಸಭ್ಯತೆ ಮತ್ತು ಮಾನಸಿಕ ಕಿರುಕುಳಕ್ಕೆ ವಿಜಯಲಕ್ಷ್ಮಿ ದರ್ಶನ್ ಬಹಿರಂಗವಾಗಿ ಸವಾಲು ಹಾಕಿದ್ದಾರೆ. ತನ್ನ ಬಗ್ಗೆ ಕೆಟ್ಟ ಕಾಮೆಂಟ್ ಮಾಡಿದವರ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡಿರುವ ಅವರು, ಅಭಿಮಾನಿಗಳ ಹೆಸರಲ್ಲಿ ನಡೆಯುವ ದೌರ್ಜನ್ಯಕ್ಕೆ ತೆರೆ ಎಳೆದಿದ್ದಾರೆ.
ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ತೀಕ್ಷ್ಣ ಪದಗಳಲ್ಲಿ ಪ್ರತಿಕ್ರಿಯಿಸಿರುವ ವಿಜಯಲಕ್ಷ್ಮಿ, ಅಸಭ್ಯ ಭಾಷೆ ಬಳಸಿ ಕಾಮೆಂಟ್ ಮಾಡಿದ ಖಾತೆಗಳ ಸ್ಕ್ರೀನ್ಶಾಟ್ಗಳನ್ನು ಹಂಚಿಕೊಂಡಿದ್ದಾರೆ. “ಕೀಳು ಭಾಷೆ ಬಳಸುವ ಕ್ಲಾಸಿ ಹುಡುಗಿಯರು ಮತ್ತು ಸಭ್ಯತೆಯನ್ನು ಸಂಪೂರ್ಣವಾಗಿ ಮರೆತ ಕ್ಲಾಸಿ ಪುರುಷರಿಗೆ ವಿಶೇಷ ಅಭಿನಂದನೆಗಳು” ಎಂದು ವ್ಯಂಗ್ಯವಾಡಿದ್ದಾರೆ.
“ನಾನು ಮೌನವಾಗಿ ಇದನ್ನು ಸಹಿಸುವುದಿಲ್ಲ. ಇದು ಕೇವಲ ನನ್ನ ಬಗ್ಗೆ ಅಲ್ಲ. ಪ್ರತಿಯೊಬ್ಬ ಮಹಿಳೆಯೂ ಗೌರವಕ್ಕೆ ಅರ್ಹಳು” ಎಂದು ಅವರು ಖಡಕ್ ಸಂದೇಶ ನೀಡಿದ್ದಾರೆ. ಆನ್ಲೈನ್ ಕಿರುಕುಳವನ್ನು ಸಾಮಾನ್ಯವಾಗಿ ಪರಿಗಣಿಸಬಾರದು ಎಂಬ ಬಲವಾದ ಸಾಮಾಜಿಕ ಸಂದೇಶ ಈ ಹೇಳಿಕೆಯ ಮೂಲಕ ಹೊರಬಿದ್ದಿದೆ.



