ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಬುಧವಾರ ಶಿರಹಟ್ಟಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪಿಎಸ್‌ಐ ಚನ್ನಯ್ಯ ದೇವೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಗಣೇಶ ಹಬ್ಬ ಮತ್ತು ಈದ್-ಮಿಲಾದ್ ಹಬ್ಬಗಳನ್ನು ಶಾಂತಿ ಮತ್ತು ಸುವ್ಯವಸ್ಥೆಯಿಂದ ಸಾರ್ವಜನಿಕರು ಆಚರಿಸುವುದಕ್ಕೆ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಸ್ಥಾಪನೆಗೆ ಸಮಿತಿಯವರು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಪಿಓಪಿಯಿಂದ ಮಾಡಿದ ಗಣೇಶ ಮೂರ್ತಿ, ವಿಗ್ರಹಗಳನ್ನು ಬಳಸಬಾರದು ಮತ್ತು ನಿಗದಿತ ಸ್ಥಳ ಹೊರತುಪಡಿಸಿ ಇತರ ಜಲಮೂಲಗಳಲ್ಲಿ ವಿಗ್ರಹಗಳನ್ನು ವಿಸರ್ಜಿಸಬಾರದು. ಪರಿಸ್ನೇಹಿ ಗಣಪತಿಗಳನ್ನು ಬಳಸಬೇಕು ಮತ್ತು ಸಿಎಸ್‌ಐಆರ್ ಮತ್ತು ರಾಷ್ಟ್ರೀಯ ಪರಿಸರ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯವರು ಜಾರಿಗೊಳಿಸಿದ ಮಾರ್ಗಸೂಚಿಗಳನ್ನು, ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಬಳಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಬ್ಬಗಳನ್ನು ಆಚರಿಸಬೇಕು. ಇಲಾಖೆಯ ಜಾರಿಗೊಳಿಸಿರುವಂತಹ ಎಲ್ಲ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕೆಂದು ಹೇಳಿದರು.
ಕ್ರೈಂ ಪಿಎಸ್‌ಐ ಕಡಬಿನ, ಮತ್ತು ಕೆಎಸ್‌ಆರ್‌ಪಿ ತುಕಡಿ ಮತ್ತು ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.