ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸದ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಸದ್ಭಾವನಾ ದಿನದ ಪ್ರತಿಜ್ಞಾ ವಿಧಿ ಬೋಧಿಸಿ, ಜಾತಿ, ಧರ್ಮ, ಪ್ರದೇಶ, ಮತ ಹಾಗೂ ಭಾಷೆಯ ಭೇದವಿಲ್ಲದೆ ದೇಶದ ಎಲ್ಲ ಜನರ ನಡುವೆ ಭಾವೈಕ್ಯತೆ ಮತ್ತು ಸೌಹಾರ್ದ ಬೆಳೆಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.
ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಎಲ್ಲ ಸಮುದಾಯಗಳ ನಡುವೆ ಪರಸ್ಪರ ಗೌರವ ಮತ್ತು ವಿಶ್ವಾಸ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

