ಪ್ರತಿಯೊಬ್ಬರ ಮತವೂ ದೊಡ್ಡ ಶಕ್ತಿ

0
mahila makkala ilakhe
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಪ್ರಜ್ಞಾವಂತರ ಮತದಾನದ ಪ್ರಮಾಣ ಕಡಿಮೆಯಾದರೆ ದೇಶಕ್ಕೆ ಗಂಡಾಂತರ ತಪ್ಪಿದ್ದಲ್ಲ. ಪ್ರಜಾಪ್ರಭುತ್ವದ ತಾಯಿಬೇರಿನಂತಿರುವ ಮತದಾನ ಪ್ರಕ್ರಿಯೆಯಿಂದ ಪ್ರಜ್ಞಾವಂತರು ದೂರ ಉಳಿಯಬಾರದು ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಸಿ.ಬಿ. ದೇವರಮನಿ ಅಭಿಪ್ರಾಯಪಟ್ಟರು.

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಕಾಲ್ನಡಿಗೆ ಜಾಥಾ ಹಾಗೂ ಮನೆ ಮನೆ ಭೇಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗದಗ ತಾಲೂಕು ಸ್ವೀಪ್ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಕಳೆದ ಬಾರಿಯ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನ ಕೇಂದ್ರಗಳಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಬೃಹತ್ ಮಟ್ಟದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಎಂದರು.

ತಾಲೂಕು ಸ್ವಿಪ್ ಸಮಿತಿ ಅಧ್ಯಕ್ಷ ಮಾಣಿಕರಾವ ಪಾಟೀಲ ಮಾತನಾಡಿ, ಕಡಿಮೆ ಮತದಾನವಾದ ಮತಗಟ್ಟೆಗಳ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ. ಈ ಅಭಿಯಾನದ ಅಂಗವಾಗಿ ಈ ಪ್ರದೇಶಗಳಲ್ಲಿ ಈ ಸಾರಿ ನೂರಕ್ಕೆ ನೂರರಷ್ಟು ಮತದಾನವಾಗಬೇಕು. ಅದಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಕಾಲ್ನಡಿಗೆ ಜಾಥಾ ಹಾಗೂ ಮನೆ ಮನೆ ಭೇಟಿ ನೀಡುವ ಮೂಲಕ ಎಲ್ಲರೂ ತಪ್ಪದೇ ಮತ ನೀಡುವಂತೆ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜಾಗೃತಿ ಜಾಥಾದಲ್ಲಿ ಮತದಾನದ ಘೋಷಣೆಗಳನ್ನು ಕೂಗುತ್ತಾ ಕಡ್ಡಾಯವಾಗಿ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥಾದಲ್ಲಿ ಮತದಾರರನ್ನು ಭೇಟಿ ಮಾಡಿ ಮತದಾನದ ಮಹತ್ವದ ಬಗ್ಗೆ ತಿಳುವಳಿಕೆ ಮೂಡಿಸಿದರು.

ಬೆಟಗೇರಿಯ ಸಿಎಸ್‌ಐ ಆಸ್ರತೆಯ ಹತ್ತಿರದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಕಡ್ಡಾಯ ಮತದಾನ ಘೋಷಣೆಗಳ ಮೂಲಕ ಕರೆ ನೀಡಲಾಯಿತು. ಜಾಥಾದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರೂ ಕೈಯಲ್ಲಿ ಕಡ್ಡಾಯ ಮತದಾನದ ಘೋಷವಾಕ್ಯದ ಪ್ಲೇಕಾರ್ಡ್ಗಳನ್ನು ಹಿಡಿದು ಪಾಲ್ಗೊಂಡಿದ್ದು ಪ್ರೇರಣೆಯಾಗಿತ್ತು.


Spread the love

LEAVE A REPLY

Please enter your comment!
Please enter your name here