ಚಾಮರಾಜನಗರ: ಮಾಜಿ ಶಿಕ್ಷಣ ಸಚಿವ, ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆದರ್ಶ ಬಡಾವಣೆಯಲ್ಲಿ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡು ಕಳ್ಳತನಕ್ಕೆ ಸಂಚು ನಡೆಸಿದ ಖದೀಮರು, ಬಾಗಿಲ ಬೀಗ ಮುರಿದು ಸಚಿವನ ಮನೆಗೆ ನುಗ್ಗಿ ಮನೆಯಲ್ಲಿದ್ದ 50 ಸಾವಿರ ರೂ. ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



