ವಿಜಯಸಾಕ್ಷಿ ಸುದ್ದಿ, ಗದಗ: 2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ನ್ನು ಮೇ 26ರಿಂದ ಜೂನ್ 02ರವರೆಗೆ ನಡೆಸಲಾಗುತ್ತದೆ. ಪ್ರಪ್ರಥಮ ಬಾರಿಗೆ ಪರೀಕ್ಷೆಗೆ ನೋಂದಣಿಯಾಗುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
Advertisement
ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ 10 ಕೊನೆಯ ದಿನವಾಗಿದ್ದು, ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಗದಗ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡು ಪರೀಕ್ಷೆ-2 ಬರೆಯುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.


