ಸದೃಢ ಆರೋಗ್ಯ ಹೊಂದಲು ದಿನನಿತ್ಯದ ಜೀವನದಲ್ಲಿ ವ್ಯಾಯಾಮ ಮುಖ್ಯ: ಡಾ.ಈಶ್ವರ ಉಳ್ಳಾಗಡ್ಡಿ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಪ್ರತಿ ದಿನ ಒತ್ತಡದ ನಡುವೆ ಕಾರ್ಯ ನಿರ್ವಹಿಸುತ್ತಿರುತ್ತೇವೆ. ಒತ್ತಡ ನಿವಾರಣೆ ಹಾಗೂ ಸದೃಢ ಆರೋಗ್ಯ ಹೊಂದಲು ದಿನನಿತ್ಯದ ಜೀವನದಲ್ಲಿ ವ್ಯಾಯಾಮ ಅತೀ ಮುಖ್ಯ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು.

Advertisement

ಶನಿವಾರ ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪೊಲೀಸರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಕ್ರೀಡೆಗಳು ಸಹಾಯಕವಾಗಿವೆ. ದಿನನಿತ್ಯ ವ್ಯಾಯಾಮಕ್ಕೆ ಒತ್ತು ನೀಡಬೇಕಾಗಿದೆ. ಯಾವುದಾದರೂ ಒಂದು ಕ್ರೀಡೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸದೃಢರಾದಾಗ ಮಾತ್ರ ಉತ್ತಮ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ಮಾತನಾಡಿ, ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಉತ್ತಮ ಮೆರುಗು ತರಲಾಗಿದೆ. ಪೊಲೀಸರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಕಡೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವ ಹೊಣೆ ಎಲ್ಲರ ಮೇಲಿದೆ. ಶ್ರಮ ವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಕಳೆದ ಬಾರಿ ಪುರುಷರ ವಿಭಾಗದಲ್ಲಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದಿದ್ದ ವೆಂಕಟೇಶ ನಾಯ್ಕ ಕ್ರೀಡಾ ಜ್ಯೋತಿಯನ್ನು ಅತಿಥಿಗಳಿಗೆ ಹಸ್ತಾಂತರಿಸಿದರು. ಆರ್‌ಪಿಐ ಮಾರುತಿ ಹೆಗಡೆ ಮುಂದಾಳತ್ವದಲ್ಲಿ ಉತ್ತರ ವಿಭಾಗ, ದಕ್ಷಿಣ ವಿಭಾಗ, ಧಾರವಾಡ ವಿಭಾಗ, ಮಹಿಳಾ ವಿಭಾಗ, ಸಂಚಾರಿ ವಿಭಾಗ ಮತ್ತು ಸಿ.ಎ.ಆರ್. ವಿಭಾಗ ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿದವು.

ಕಾರ್ಯಕ್ರಮದಲ್ಲಿ ಡಿಸಿಪಿಗಳಾದ ರವೀಶ ಸಿ.ಆರ್., ಯಲ್ಲಪ್ಪ ಕಾಶಪ್ಪನವರ, ಪಿಟಿಎಸ್ ಪ್ರಾಚಾರ್ಯ ಎಂ.ಎA. ಯಾದವಾಡ, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಕುಟುಂಬಸ್ಥರು ಉಪಸ್ಥಿತರಿದ್ದರು.

ಪೊಲೀಸ್ ಇನ್ಸಪೆಕ್ಟರ್ ಮಾರುತಿ ಗುಳ್ಳಾರಿ ನಿರೂಪಿಸಿದರು. ಡಿಸಿಪಿ ಮಹಾನಿಂಗ ನಂದಗಾವಿ ವಂದಿಸಿದರು.


Spread the love

LEAVE A REPLY

Please enter your comment!
Please enter your name here