ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಚಾಟಿಸಿರುವ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೀಡಿರುವ ಆದೇಶ ಹಿಂಪಡೆಯುವಂತೆ ರಾಷ್ಟ್ರೀಯ ವರಿಷ್ಠರಿಗೆ ಮನವಿ ಮಾಡಲು ಭಿನ್ನರ ಬಣದ ಪ್ರಮುಖರು ನಿರ್ಧರಿಸಿದ್ದು,
ಇದರ ಬೆನ್ನಲ್ಲೇ ಅಮವಾಸ್ಯೆಯ ಪ್ರಯುಕ್ತ ನಗರದ ಶನಿಮಹಾತ್ಮ ದೇವಸ್ಥಾನಕ್ಕೆ ಶಾಸಕ ಬಸನಗೌಡ ಪಾಟೀಲ್ ಭೇಟಿ ನೀಡಿದ್ದಾರೆ. ದೇವಸ್ಥಾನದಲ್ಲಿ ನಡೆದ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದರು. ಇನ್ನೂ ಪೂಜೆ ಮುಗಿಸಿ ಶಾಸಕ ಬಸನಗೌಡ ಪಾಟೀಲ್ ಕಲಬುರಗಿಗೆ ತೆರಳಿಸಿದ್ದಾರೆ.
ಸದ್ಯ ನಿನ್ನೆ ಅವರು ಮಾಜಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಮನೆಗೆ ಭೇಟಿ ನೀಡಿದ್ದರು. ಯತ್ನಾಳ್ ವಿರುದ್ಧ ಹೈಕಮಾಂಡ್ ತೆಗೆದುಕೊಂಡಿರುವ ಕ್ರಮದ ಬಗ್ಗೆ ಪುನರ್ ಪರಿಶೀಲನೆ ಮಾಡುವಂತೆ ಪತ್ರದ ಮೂಲಕ ಮನವಿ ಮಾಡಲು ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.