ಲಕ್ನೋ:- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಇಲ್ಲಿನ ಗುಡಂಬಾ ಪ್ರದೇಶದ ಮನೆಯೊಂದರಲ್ಲಿ ಜರುಗಿದೆ.
ಭಾನುವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ.
ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಐವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ, ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದ ಮೂವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.