ಮೈಸೂರು:- ವಿಶ್ವವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ನೈಟ್ರೋಜನ್ ಗ್ಯಾಸ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.
ಬಲೂನ್ಗೆ ಗ್ಯಾಸ್ ತುಂಬಿಸುವ ವೇಳೆ ಅವಘಡ ಸಂಭವಿಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ದೇಹ ಛಿದ್ರ ಛಿದ್ರವಾಗಿದೆ. ಗಾಯಾಳುಗಳನ್ನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಮೃತ ದುರ್ದೈವಿಯನ್ನ 40 ವರ್ಷದ ಖಮರುದ್ದಿನ್ ಎಂದು ಗುರುತಿಸಲಾಗಿದ್ದು, ಉತ್ತರ ಪ್ರದೇಶದ ಕನೋಜ್ ಜಿಲ್ಲೆಯ ತೊಫಿಯ ಗ್ರಾಮದವರಾಗಿದ್ದ ಖಮರುದ್ದೀನ್, ಬಲೂನ್ ಮಾರಾಟ ಮಾಡಲು ಮೈಸೂರಿಗೆ ಬಂದಿದ್ದರು, ಆದ್ರೆ ದುರಾದೃಷ್ಟವಶಾತ್ ಹೀಲಿಯಂ ಸಿಲಿಂಡರ್ ಬ್ಲಾಸ್ಟ್ ಆಗಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಬೆಂಗಳೂರಿನ ಲಕ್ಷ್ಮಿ, ನಂಜನಗೂಡಿನ ಮಂಜುಳ, ಕೋಲ್ಕತ್ತಾ ಮೂಲದ ಶಾಹಿನಾ ಶೇಬರ್ ಹಾಗೂ ರಾಣೆಬೆನ್ನೂರಿನ ಕೊಟ್ರೇಶ್ ಗುಟ್ಟೆ ಎಂಬುವರಿಗೆ ಗಾಯಗಳಾಗಿದ್ದು, ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮೈಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



