ಬೆಂಗಳೂರು: ಬೆಂಗಳೂರಿನ ಕಲಾಸಿಪಾಳ್ಯ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾದ ಘಟನೆ ಭಾರೀ ಆತಂಕ ಮೂಡಿಸಿದೆ. ಶೌಚಾಲಯದ ಬಳಿಯಲ್ಲಿ ನಿಗೂಢ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ 6 ಜಿಲೆಟಿನ್ ಹಾಗೂ ಕೆಲವು ಡಿಟೋನೆಟರ್‌ಗಳು ಇದ್ದವು.
ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಒಂದು ಬ್ಯಾಗ್ ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಸ್ಥಳಕ್ಕೆ ಡಿಸಿಪಿ ಎಸ್.ಗಿರೀಶ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸದ್ಯ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಸ್ಫೋಟಕವನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
ಜಿಲೆಟಿನ್ ಕಡ್ಡಿ ಜೊತೆಗೆ ಕೆಲವು ಡಿಟೋನೆಟರ್‌ಗಳು ಕೂಡ ಪತ್ತೆಯಾಗಿದ್ದು, ಈ ಸಂಬಂಧ ಸಂಬಂಧ ಕಲಾಸಿಪಾಳ್ಯ ಪೊಲೀಸರು ಎಫ್ಐಆರ್ ದಾಖಲಿಸಿಕೊಳ್ಳುತ್ತಿದ್ದಾರೆ. ಜಿಲೆಟಿನ್ ಹಾಗೂ ಡಿಟೋನೇಟರ್ ಇಟ್ಟ ವ್ಯಕ್ತಿ ಬಗ್ಗೆ ಈಗಾಗಲೇ ಪೊಲೀಸರು ಶೋಧ ನಡೆಸಲು ಮುಂದಾಗಿದ್ದು, ಈಗಾಗಲೇ ಸಿಸಿಟಿವಿಗಳ ಪರಿಶೀಲನೆಗೆ ಪೊಲೀಸರು ಇಳಿದಿದ್ದಾರೆ.