SSLC ಪರೀಕ್ಷೆಯಲ್ಲಿ ಫೇಲ್: ಶಾಲೆಯ ಆವರಣದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ!

0
Spread the love

ಗದಗ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ. ರಾಕೇಶ್ ಮಣ್ಣೊಡ್ಡರ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು,

Advertisement

ರಾಜ್ಯಮಟ್ಟದ ಕಬ್ಬಡ್ಡಿ ಆಟಗಾರನಾಗಿದ್ದ ರಾಕೇಶ್ ನರೇಗಲ್ ಪಟ್ಟಣದ ಅನ್ನದಾನೇಶ್ವರ ಹೈಸ್ಕೂಲ್ ನಲ್ಲಿ ನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಉತ್ತಮ ಆಟದಿಂದ ಸಾಕಷ್ಟು ಪ್ರಶಸ್ತಿ ಪಡೆದಿದ್ದ ರಾಕೇಶ್, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದನು.

ಇದರಿಂದ ಮನನೊದು ಸರ್ಕಾರಿ ಶಾಲೆಯ ಆವರಣದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬೆಳಿಗ್ಗೆ ವಾಕಿಂಗ್ ಬಂದವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು, ನರೇಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here