ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ: ಎಫ್‌ಐಆರ್‌ ದಾಖಲು

0
Spread the love

ಬೆಂಗಳೂರು: ಕಿಡಿಗೇಡಿಗಳು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದಿದ್ದು, ಈ ಸಂಬಂಧ ಸಿಸಿಬಿ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರ ಹೆಸರಿನಲ್ಲಿ ಫೇಸ್‌ಬುಕ್ ಖಾತೆ ತೆರೆದು ಮೆಸೇಜ್​ ಮಾಡಲಾಗಿದೆ.

Advertisement

ಈ ಸಂಬಂಧ ಬೆಂಗಳೂರು ಕೇಂದ್ರ ವಿಭಾಗದ ಸೈಬ‌ರ್ ಅಪರಾಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್​ ಅವರು ನೀಡಿದ ನೀಡಿದ ದೂರು ಆಧರಿಸಿ ಭಾರತೀಯ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆ.66 (ಸಿ)ರ ಅಡಿ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ನಕಲಿ ಖಾತೆ ತೆರೆದಿರುವ ಆರೋಪಿಯನ್ನು ಪತ್ತೆಹಚ್ಚಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗೊದೆ.


Spread the love

LEAVE A REPLY

Please enter your comment!
Please enter your name here