ಬೆಳಗಾವಿ:- ಬೆಳಗಾವಿ SP ಹೆಸರಲ್ಲಿ ನಕಲಿ ಫೇಸ್‌ಬುಕ್ ತೆಗೆದು ವಂಚಿಸುತ್ತಿದ್ದ ರಾಜಸ್ಥಾನ್ ಮೂಲದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ.
ಆರೋಪಿಯು, ಕೇವಲ ಬೆಳಗಾವಿ ಮಾತ್ರವಲ್ಲದೇ ಗದಗ ಮತ್ತು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೆಸರಿನಲ್ಲೂ ನಕಲಿ ಖಾತೆಯನ್ನು ವಂಚಿಸಿದ್ದ.
ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದು ವಂಚಿಸುತ್ತಿರುವ ಮಾಹಿತಿ ತಿಳಿದ ಬೆನ್ನಲ್ಲೇ ಆತನ ವಿರುದ್ಧ ಬೆಳಗಾವಿ ಎಸ್ಪಿ ಎಫ್‌ಐಆರ್ ದಾಖಲಿಸಿದ್ದಾರೆ. ದಾಖಲಿಸಿದ ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಯಾವ ಪೊಲೀಸ್ ಅಧಿಕಾರಿಗಳೂ ಹಣ ಕೇಳುವುದಿಲ್ಲ. ಜಾಲತಾಣ ನಂಬಿ, ಯಾರೂ ಹಣ ಕೊಡಬಾರದು. ಇಂತಹ ಸಂಗತಿಗಳಿಂದ ಎಚ್ಚರದಿಂದ ಇರಬೇಕು ಎಂದು ಎಸ್ಪಿ ಡಾ.ಭೀಮಾಶಂಕರ ಗುಳೇದ ಮಾಹಿತಿ ಕೊಟ್ಟಿದ್ದಾರೆ.



