HomeKarnataka Newsನಕಲಿ ಗೋವಾ ಮದ್ಯ ತಯಾರಿ ದಂಧೆ: ತೋಟದ ಮನೆಯಲ್ಲಿ ಖದೀಮರು ಲಾಕ್!

ನಕಲಿ ಗೋವಾ ಮದ್ಯ ತಯಾರಿ ದಂಧೆ: ತೋಟದ ಮನೆಯಲ್ಲಿ ಖದೀಮರು ಲಾಕ್!

For Dai;y Updates Join Our whatsapp Group

Spread the love

ಹುಬ್ಬಳ್ಳಿ:- ತಾಲೂಕಿನ ಛಬ್ಬಿ ಗ್ರಾಮದ ಬಮ್ಮಸಮುದ್ರ ರಸ್ತೆ ಬಳಿಯ ತೋಟದ ಮನೆಯಲ್ಲಿ ನಕಲಿ ಮದ್ಯೆ ಪತ್ತೆಯಾಗಿದ್ದು, ಇಬ್ಬರು ಖದೀಮರನ್ನು ಅರೆಸ್ಟ್ ಮಾಡಲಾಗಿದೆ. ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ಬೆಳಗಾವಿ ವಿಭಾಗದ ಅಬಕಾರಿ, ಜಂಟಿ ಆಯುಕ್ತರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ಮದ್ಯ ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಬಳಿಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಹೊರಠಾಣೆಯ ಕೂಗಳತೆಯ ದೂರದಲ್ಲಿಯೇ ನಕಲಿ ಮದ್ಯ ಮಾರಾಟ ದಂಧೆ ಎಗ್ಗಿಲ್ಲದೆ ಮುಂದುವರಿದಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ಎಸ್​​ಪಿ ವಿಜಯಕುಮಾರ್ ಹಿರೇಮಠ ನೇತೃತ್ವದಲ್ಲಿ ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.‌ ಈ ಬಗ್ಗೆ ಧಾರವಾಡ ಅಬಕಾರಿ ಉಪಆಯುಕ್ತ ರಮೇಶ್ ಕುಮಾರ್ ಹೆಚ್ ಮಾಹಿತಿ ನೀಡಿದ್ದಾರೆ.

ಇನ್ನು ತೋಟದ ಮನೆಯಲ್ಲಿ ನಕಲಿ ಮದ್ಯ ತಯಾರು ಮಾಡುತ್ತಿದ್ದ ಹುಬ್ಬಳ್ಳಿ ಮೂಲದ ಸಂದೀಪ್ ಹಾಗೂ ಅಮೃತ್ ಎಂಬ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ನಕಲಿ ಲೇಬಲ್, ಭದ್ರಾತಾ ಚೀಟಿ ಸೇರಿ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಬಕಾರಿ ಪೊಲೀಸರು ದಾಳಿ ಮಾಡಿದಾಗ ಇಬ್ಬರು ಯುವಕರು ನಕಲಿ ಮದ್ಯ ತಯಾರು ಮಾಡುತ್ತಿದ್ದರು. ಇದರಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದ ಬ್ರಾಂಡ್ ಯಾವುದೂ ಇರಲಿಲ್ಲ. ಬರೊಬ್ಬರಿ 5 ಲಕ್ಷ ರೂ. ಮೌಲ್ಯದ ಮದ್ಯ ಹಾಗೂ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಬಕಾರಿ‌ ಉಪ ಆಯುಕ್ತ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!