ಹಾವೇರಿ: ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಹೌದು ಪಹಣಿಯಲ್ಲಿ ವಕ್ಫ್ ಎಂದು ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.
ಇದೀಗ ಸಾಲಬಾಧೆಗೆ ನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಈ ಕಾರಣಕ್ಕೆ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಮೃತ ರೈತ ರುದ್ರಪ್ಪನ ಕುಟುಂಬಸ್ಥರು ಗುರುವಾರ ಹುಬ್ಬಳ್ಳಿಯಲ್ಲಿ ವಕ್ಫ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ವಕ್ಫ್ ಬೋರ್ಡ್ನಿಂದ ಅನ್ಯಾಯ ಆಗಿರೋದಾಗಿ ದೂರು ನೀಡಿದ್ದರು. ಆದರೆ ವಕ್ಫ್ ಎಂದು ನಮೂದಾಗಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಪೊಲೀಸರು ಹಾಗೂ ಜಿಲ್ಲಾಡಳಿತ ಈಗ ಸ್ಪಷ್ಟನೆ ನೀಡಿದೆ.