ಬೆಂಗಳೂರು: ಪಾರ್ಕ್ ನಲ್ಲಿ ಕುಳಿತುಕೊಳ್ಳುವ ಜೋಡಿಗಳ ಬಳಿ ಪೊಲೀಸ್ ವೇಶದಲ್ಲಿ ಸುಲಿಗೆ ಮಾಡುತ್ತಿದ್ದ ನಕಲಿ ಪೊಲೀಸ್‌ನನ್ನ ಜಯನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅನೀಫ್ ಖಾನ್ @ ಪಿಸ್ತೂಲ್ ಬಂಧಿತ ಆರೋಪಿಯಾಗಿದ್ದು,
Advertisement
ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಆಸೀಫ್ ಪೊಲೀಸ್ ಎಂದು ಹೇಳಿಕೊಂಡು ಬಂದು ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್‌ನಲ್ಲಿರುವವರನ್ನು ಟಾರ್ಗೆಟ್ ಮಾಡಿಕೊಂಡು ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ.
ಆಸಿಫ್ ಇಬ್ಬರಿಂದ 12 ಗ್ರಾಂನ ಚಿನ್ನದ ಸರ ಹಾಗೂ 5 ಗ್ರಾಂನ ರಿಂಗ್ ಹಾಗೂ 10,000 ರೂ. ಹಣ ಡ್ರಾ ಮಾಡಿಸಿಕೊಂಡು ಎಸ್ಕೇಪ್ ಆಗಿದ್ದ. ಪೋಲಿಸ್ ಎಂದು ಹೇಳಿ ಪಾರ್ಕ್‌ನಲ್ಲಿ ಕೂರುವವರಿಂದ ಸುಲಿಗೆ ಮಾಡುತ್ತಿದ್ದ ಆಸೀಫ್, ಇದೇ ರೀತಿ ಸಾಕಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಇದೀಗ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.