ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಾವಗ ಬೀಳುತ್ತದೆ ಗೊತ್ತಿಲ್ಲ. ಆದರೆ ಈ ಸರ್ಕಾರ ಬೀಳೋದು ಗ್ಯಾರಂಟಿ ಎಂದು ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕುಂಟುತ್ತಿದೆ. ಇದು ಬಹಳ ದಿನ ನಿಲ್ಲುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ.
ಆದರೆ ಈ ಸರ್ಕಾರ ಬೀಳೋದು ಗ್ಯಾರಂಟಿ ಎಂದು ಹೇಳಿದ್ದಾರೆ. ಇನ್ನೂ ಗ್ಯಾರಂಟಿ ನಿಲ್ಲಿಸಲಿ ಬಿಡಲಿ, ಅದು ಸರ್ಕಾರಕ್ಕೆ ಸಂಬಂಧಿಸಿದ ವಿಚಾರ. ಆದರೆ ಮುಂದೆ ಕಾಂಗ್ರೆಸ್ ಸರ್ಕಾರ ಏನಾಗುತ್ತದೆ ಎಂಬುದು ನಮಗೆ ಗೊತ್ತಿದೆ. ರಾಮಕೃಷ್ಣ ಹೆಗಡೆಯವರಿಗೆ ಮುಂದೆ ಏನಾಗುತ್ತೆ ಅನ್ನೋದು ಹೇಗೆ ಗೊತ್ತಾಗುತ್ತಿತ್ತೋ, ಹಾಗೆ ನಂಗು ಗೊತ್ತಾಗುತ್ತದೆ ಎಂದು ಹೇಳಿದರು.



